ವೇದಿಕೆ ಮೇಲೆ ಬಿಎಸ್ ವೈ ಜೊತೆ ಮಾತನಾಡದೇ ನಿರ್ಗಮಿಸಿದ ಪ್ರಧಾನಿ ಮೋದಿ

ಸೋಮವಾರ, 11 ಫೆಬ್ರವರಿ 2019 (06:43 IST)
ಹುಬ್ಬಳ್ಳಿ : ಧಾರವಾಡ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ಎರಡೂ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾತನಾಡಿಸಲಿಲ್ಲ ಎಂಬುದಾಗಿ ತಿಳಿದುಬಂದಿದೆ.


ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಬಳಿಕ ಅಲ್ಲಿಂದ ನಿರ್ಗಮಿಸುವ ವೇಳೆ ವೇದಿಕೆ ಮೇಲಿದ್ದ ಎಲ್ಲಾ ಗಣ್ಯರಿಗೂ ಧನ್ಯವಾದ ತಿಳಿಸಿದ್ದರು. ಆದರೆ ಬಿ.ಎಸ್.ಯಡಿಯೂರಪ್ಪ ಕೈ ಮುಗಿದುಕೊಂಡು ನಿಂತಿದ್ದರೂ ಅದನ್ನು ನೋಡದೇ ವೇದಿಕೆಯಿಂದ ನಿರ್ಗಮಿಸಿದ್ದಾರೆ. ಹಾಗೇ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿಯೂ ಕೂಡ  ತಮ್ಮ ಪಕ್ಕದಲ್ಲೇ ಬಿ.ಎಸ್.ಯಡಿಯೂರಪ್ಪ ಕುಳಿತಿದ್ದರೂ ಪ್ರಧಾನಿ ಮೋದಿ ಮಾತನಾಡಲಿಲ್ಲ.


ಈ ಎಲ್ಲಾ ಬೆಳವಣೆಗೆಗಳನ್ನು ನೋಡಿದರೆ ಆಡಿಯೋ ಪ್ರಕರಣವನ್ನು ಬಿ.ಎಸ್.ಯಡಿಯೂರಪ್ಪನವರು ಒಪ್ಪಿಕೊಂಡಿದ್ದಕ್ಕೆ ಪ್ರಧಾನಿ ಮೋದಿ ಫುಲ್ ಗರಂ ಆಗಿದ್ದಾರೆ. ಹಾಗೇ  ರಾಜ್ಯದಲ್ಲಿ ಸರ್ಕಾರ ರಚಿಸಲು ವಿಫಲವಾಗಿದ್ದಾರೆ ಎನ್ನುವ ಕಾರಣಕ್ಕೆ ಮೋದಿ ಮುನಿಸಿಕೊಂಡಿದ್ದರು ಎನ್ನುವ ಮಾತುಗಳು ಬಿಜೆಪಿ ನಾಯಕರಿಂದ ಕೇಳಿಬರುತ್ತಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಅಬುಧಾಬಿಯಲ್ಲಿ ನೆಲೆಸಿರುವ ಭಾರತೀಯರಿಗೊಂದು ಸಿಹಿಸುದ್ದಿ