Publish Date: Sat, 12 Aug 2017 (15:03 IST)
Updated Date: Sat, 12 Aug 2017 (15:06 IST)
ಪ್ರಧಾನಮಂತ್ರಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಮಾತ್ರ ಶೂನ್ಯ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ನಂತರ ದೇಶದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಚ್ಚೇ ದಿನ್‌ಗಾಗಿ ಜನತೆ ಇನ್ನೂ ಕಾಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಪಕ್ಷದವರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ವಿಪಕ್ಷಗಳನ್ನು ವ್ಯವಸ್ಥಿತವಾಗಿ ತುಳಿಯುವ ಷಡ್ಯಂತ್ರ ನಡೆಯುತ್ತಿದೆ. ನೋಟ್‌ಬ್ಯಾನ್ ಮಾಡಿ ದೇಶದ ಆರ್ಥಿಕ ವ್ಯವಸ್ಥೆಯನ್ನು ಹದಗೆಡಿಸಿದ್ದಾರೆ ಎಂದು ಗುಡುಗಿದರು.
ಕೇಂದ್ರ ಸರಕಾರದ ನೀತಿಗಳು ದೇಶಕ್ಕೆ ಮಾರಕವಾಗಿವೆ. ಯುಪಿಎ ಸರಕಾರದ ಸಾಧನೆಗಳನ್ನು ಜಾರಿಗೊಳಿಸಿ ಎನ್‌ಡಿಎ ಸರಕಾರ ತಮ್ಮದೇ ನೀತಿಗಳು ಎಂದು ಬಿಂಬಿಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.
ಸಚಿವ ಸಂಪುಟದಲ್ಲಿ ಖಾಲಿಯಾಗಿರುವ ಮೂರು ಸ್ಥಾನಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ಸಮಾವೇಶ ಮುಗಿದ ನಂತರ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.