Webdunia - Bharat's app for daily news and videos

Install App

ಪ್ರಧಾನಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಶೂನ್ಯ: ಸಿಎಂ ವಾಗ್ದಾಳಿ

Webdunia
ಶನಿವಾರ, 12 ಆಗಸ್ಟ್ 2017 (15:03 IST)
ಪ್ರಧಾನಮಂತ್ರಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಮಾತ್ರ ಶೂನ್ಯ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ನಂತರ ದೇಶದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಚ್ಚೇ ದಿನ್‌ಗಾಗಿ ಜನತೆ ಇನ್ನೂ ಕಾಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
 
ಕಾಂಗ್ರೆಸ್ ಪಕ್ಷದವರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ವಿಪಕ್ಷಗಳನ್ನು ವ್ಯವಸ್ಥಿತವಾಗಿ ತುಳಿಯುವ ಷಡ್ಯಂತ್ರ ನಡೆಯುತ್ತಿದೆ. ನೋಟ್‌ಬ್ಯಾನ್ ಮಾಡಿ ದೇಶದ ಆರ್ಥಿಕ ವ್ಯವಸ್ಥೆಯನ್ನು ಹದಗೆಡಿಸಿದ್ದಾರೆ ಎಂದು ಗುಡುಗಿದರು.
 
ಕೇಂದ್ರ ಸರಕಾರದ ನೀತಿಗಳು ದೇಶಕ್ಕೆ ಮಾರಕವಾಗಿವೆ. ಯುಪಿಎ ಸರಕಾರದ ಸಾಧನೆಗಳನ್ನು ಜಾರಿಗೊಳಿಸಿ ಎನ್‌ಡಿಎ ಸರಕಾರ ತಮ್ಮದೇ ನೀತಿಗಳು ಎಂದು ಬಿಂಬಿಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.
 
ಸಚಿವ ಸಂಪುಟದಲ್ಲಿ ಖಾಲಿಯಾಗಿರುವ ಮೂರು ಸ್ಥಾನಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ಸಮಾವೇಶ ಮುಗಿದ ನಂತರ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನೂರು ಎನ್‌ಕೌಂಟರ್ ಬಗ್ಗೆ ಗಂಭೀರ ಅನುಮಾನ; ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು: ಬಿ.ವೈ. ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿರಳೆ ಪಾರ್ಟಿಯಂತೆ ಶುರುವಾಯ್ತು, ದಿಮಾಗಿ ನಕ್ಸಲ್ ಪಾರ್ಟಿ: ಫಾಲೋ ಲಿಸ್ಟ್ ನಲ್ಲಿದ್ದಾರೆ ರಾಹುಲ್ ಗಾಂಧಿ, ಪ್ರಕಾಶ್ ರಾಜ್

ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಬಿಗ್ ಶಾಕ್: ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಸೋಲು

ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ… ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನ ದರ್ಪ Video

ಮುಂದಿನ ಸುದ್ದಿ
Show comments