ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ - ದಿನೇಶ್ ಗುಂಡೂರಾವ್ ವಾಗ್ದಾಳಿ

ಶುಕ್ರವಾರ, 15 ಮಾರ್ಚ್ 2019 (06:55 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಸುಳ್ಳು, ಪೊಳ್ಳು, ಜೊಳ್ಳು’ ಎಂಬ ಸ್ಲೋಗನ್ ಅಡಿ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದ್ದ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ. ಹೀಗಾಗಿ ಸಾಧನೆಗಳನ್ನು ಜನರ ಮುಂದಿಟ್ಟು ಮತ ಕೇಳುವ ಬದಲು ಭಾವನಾತ್ಮಕ ಹೇಳಿಕೆಗಳ ಮೂಲಕ ಮತ ಯಾಚಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

 

ಅಲ್ಲದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನರೇಗಾ ಯೋಜನೆ ದುರ್ಬಳಕೆ ಮಾಡುವ ಪ್ರಯತ್ನ ಮಾಡಿತ್ತು. ಭೂ ಸ್ವಾಧೀನ ಕಾಯ್ದೆ ಸಡಿಲ ಮಾಡುವ ಪ್ರಯತ್ನ ಮಾಡಿದರು. ಸಾಮಾನ್ಯ ಜನರ ಬಗ್ಗೆ ಬಿಜೆಪಿಯವರಿಗೆ ಕನಿಕರವಿಲ್ಲ. ಈ ಹಿಂದೆ ಮಂದಿರ ಅಂತ ರಾಜಕಾರಣ ಮಾಡಿದರು. ಈಗ ರಾಷ್ಟ್ರೀಯತೆ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಬಿಜೆಪಿಗೆ ಸೇರ್ಪಡೆ