Publish Date: Tue, 19 Dec 2017 (08:13 IST)
Updated Date: Tue, 19 Dec 2017 (08:19 IST)
ಮಂಗಳೂರು: ಗುಜರಾತ್ ಹಾಗು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಸಂತಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾತ್ರಿ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ವಿಮಾನದಲ್ಲಿ ರಾತ್ರಿ 11.45ಕ್ಕೆ ಮಂಗಳೂರಿಗೆ ಆಗಮಿಸಿದ ಅವರನ್ನು ಮಂಗಳೂರಿನ ಜನತೆ ಆದರದಿಂದ ಸ್ವಾಗತಿಸಿದರು.
ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಪಕ್ಷದ ಕಾರ್ಯಕರ್ತರಿಗೆ ಹಾಗು ಜನತೆಗೆ ಕೈ ಬೀಸಿ ಮೋದಿಯವರು ಗೆಲುವಿನ ಖುಷಿ ಹಂಚಿಕೊಂಡಿದ್ದಾರೆ. ಅಲ್ಲಿ ಕೇಂದ್ರ ಸಚಿವ ರಾಧಾಕೃಷ್ಣನ್, ಜಿಲ್ಲಾಧಿಕಾರಿ ಸಸಿಕಾಂತ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣೆ ರಾಜು ಮೊದಲಾದವರು ಇದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.
ಮೋದಿಯವರು ಅಲ್ಲಿಂದ ಸರ್ಕಾರಿ ಅತಿಥಿ ಗೃಹಕ್ಕೆ ತೆರಳಿದರು.
ಇಂದು ವಿಮಾನದಲ್ಲಿ ಕೊಚ್ಚಿಗೆ ತೆರಳಿ, ಓಖ್ಹಿ ಚಂಡಮಾರುತದಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿನೀಡಲಿದ್ದಾರೆ. ನಂತರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ