Publish Date: Tue, 08 Jan 2019 (17:36 IST)
Updated Date: Tue, 08 Jan 2019 (17:38 IST)
ಪ್ರಧಾನಿ ನರೇಂದ್ರ ಮೋದಿ ನಾಳೆ ಬೀದರ್ ಗೆ ಭೇಟಿ ನೀಡಲಿದ್ದಾರೆ.
ಮಹಾರಾಷ್ಟ್ರರದ ಸೋಲ್ಲಾಪೂರದಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ದೆಹಲಿಯಿಂದ 9.50ಕ್ಕೆ ವಿಶೇಷ ವಿಮಾನ ಮೂಲಕ ಬೀದರ್ ಎಸ್ ಬೇಸ್ ಗೆ ಆಗಮಿಸಲಿದ್ದು, ವಾಯು ಪಡೆ ತರಬೇತಿ ಕೇಂದ್ರದಲ್ಲಿ ಕೆಲ ಹೊತ್ತು ವಿಶ್ರಾಂತಿ ಪಡೆಯುವರು.
ನಂತರ ಅಲ್ಲಿಂದ ಸೊಲ್ಲಾಪೂರಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳಸಲಿದ್ದಾರೆ. ಸೋಲಾಪೂರದಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಲಿದ್ದು, ನಂತರ ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಭೆಯನ್ನು ಉದ್ದೇಶಿಸಿ ಮಾತನಾಡಿಲಿದ್ದಾರೆ.
ಒಂದು ತಿಂಗಳ ಅವಧಿಯಲ್ಲೇ ಪ್ರಧಾನಿ ನರೆಂದ್ರ ಮೋದಿ ಮಹಾರಾಷ್ಟ್ರಕ್ಕೆ ನಾಲ್ಕು ಬಾರಿ ಭೇಟಿ ನೀಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಬೀದರ್ ಜಿಲ್ಲೆಯಲ್ಲಿ ಯಾವುದೇ ಪ್ರವಾಸ ವಿಲ್ಲದಿದ್ದರೂ, ಬೀದರ್ ನಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದಾರೆ.