Select Your Language

Notifications

webdunia
webdunia
webdunia
webdunia

ಮಂಗಳೂರು-ಬೆಂಗಳೂರು ಬಸ್ ಅಪಘಾತ: 30 ಕ್ಕೂ ಹೆಚ್ಚು ಜನರಿಗೆ ಗಾಯ

ಮಂಗಳೂರು-ಬೆಂಗಳೂರು ಬಸ್ ಅಪಘಾತ: 30 ಕ್ಕೂ ಹೆಚ್ಚು ಜನರಿಗೆ ಗಾಯ
Bangalore , ಮಂಗಳವಾರ, 11 ಏಪ್ರಿಲ್ 2017 (12:24 IST)
ಬೆಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಮಂಡ್ಯ ಜಿಲ್ಲೆಯ ನಾಗಮಂಗಲ ಬಳಿ ಲಾರಿಗೆ ಡಿಕ್ಕಿ ಹೊಡೆದಿದ್ದು, 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

 

ಸುಮಾರು 40 ಕ್ಕೂ ಹೆಚ್ಚು ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬೆಳಗಿನ ಜಾವ ಡ್ರೈವರ್ ತೂಕಡಿಸಿದ್ದರಿಂದ ಮೈ ಮರೆತು ಅಪಘಾತವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

 
ಗಾಯಗೊಂಡವರನ್ನು ತಕ್ಷಣ ಹತ್ತಿರದ ಬೇಳೂರು ಕ್ರಾಸ್ ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.  ಬೇಳೂರು ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿ ಸಂಕಷ್ಟಕ್ಕೀಡಾದ ಸಿಎಂ ಕೇಜ್ರಿವಾಲ್