Publish Date: Mon, 10 Dec 2018 (14:53 IST)
Updated Date: Mon, 10 Dec 2018 (14:55 IST)
ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಖಾಸಗಿ ಬಸ್ ವೊಂದು ಏಕಾಏಕಿಯಾಗಿ ಬೆಂಕಿಯಿಂದ ಸಂಪೂರ್ಣ ಹೊತ್ತು ಉರಿದ ಘಟನೆ ನಡೆದಿದೆ.
ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಭಸ್ಮವಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ತಮಿಳುನಾಡಿನ ಹೊಸೂರು ಸಮೀಪ ನಡೆದಿದೆ. ಹೊಸೂರ -ಕೃಷ್ಣಗಿರಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ತಮಿಳುನಾಡಿನ ತೂಪುರ್ ಬಳಿ ಕೆ.ಪಿ.ಎನ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಮಧುರೈನಿಂದ ಬೆಂಗಳೂರಿಗೆ ಬರುತ್ತಿತ್ತು.
ಈ ಸಮಯದಲ್ಲಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಚಾಲಕನ ಗಮನಕ್ಕೆ ಬಂದಿದೆ. ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾನೆ. ನಂತರ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಈ ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.