Select Your Language

Notifications

webdunia
webdunia
webdunia
webdunia

ನರಸೀಪುರ ಬಳಿ ಖಾಸಗಿ ಬಸ್, ಕಾರು ಡಿಕ್ಕಿ; ಕಾರಿನಲ್ಲಿದ್ದ 10 ಮಂದಿ ದುರ್ಮರಣ

ಅಪಘಾತ
ಮೈಸೂರು , ಮಂಗಳವಾರ, 30 ಮೇ 2023 (08:20 IST)
ಮೈಸೂರು : ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ.
 
ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರು ಪೈಕಿ ಕೆಲವರು ಬಳ್ಳಾರಿ ಸಂಗನಕಲ್ ನಿವಾಸಿಗಳಾಗಿದ್ದಾರೆ. ಇವರು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಮೃತರಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳಾಗಿದ್ದಾರೆ. 16 ಮಂದಿ ಗಾಯಾಳುಗಳಿಗೆ ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾರಂಟಿಗಳ ಬಗ್ಗೆ ಮಾತನಾಡೋರ ಬಾಯಿ ಮುಚ್ಚುವಂತೆ ಮಾಡ್ತೀವಿ : ಪಾಟೀಲ್