ದೀಪಾವಳಿ ಹಬ್ಬದ ಸಲುವಾಗಿ ಪ್ರಯಾಣಿಕರ ಬಳಿ ಖಾಸಗಿ ಬಸ್ಗಳು ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಹಿನ್ನೆಲೆ, ಖಾಸಗಿ ಬಸ್ಗಳ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ. ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದ ಬೆನ್ನಲ್ಲೇ ಬೆಂಗಳೂರು ನಗರ ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ ಖುದ್ದು ಪರಿಶೀಲನೆಗೆ ಇಳಿದಿದ್ದಾರೆ. ಖಾಸಗಿ ಬಸ್ ಮಾಲೀಕರು ದೀಪಾವಳಿ ಹಬ್ಬವನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಈಗಾಗಿ ಸಾರಿಗೆ ಇಲಾಖೆ ಆಧಿಕಾರಿಗಳು ದೂರನ್ನು ಆಧರಿಸಿ ಬಸ್ ದರ ಪರಿಶೀಲನೆ ಮಾಡುತ್ತಿದ್ದಾರೆ.