ರೇಣುಕಾಸ್ವಾಮಿ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ: ಮಗುವಿಗಾದ್ರೂ ಒಳ್ಳೆ ಬುದ್ಧಿ ಕೊಡ್ಲಿ ಎಂದ ನೆಟ್ಟಿಗರು

Krishnaveni K
ಬುಧವಾರ, 16 ಅಕ್ಟೋಬರ್ 2024 (14:14 IST)
ಚಿತ್ರದುರ್ಗ: ದರ್ಶನ್ ಆಂಡ್ ಗ್ಯಾಂಗ್ ನಿಂದ ಹಲ್ಲೆಗೊಳಗಾದ ಪರಿಣಾಮ ಹತ್ಯೆಗೀಡಾದರು ಎನ್ನಲಾದ ರೇಣುಕಾಸ್ವಾಮಿ ಪತ್ನಿ ಸಹನಾಗೆ ಇಂದು ಬೆಳಿಗ್ಗೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ರೇಣುಕಾಸ್ವಾಮಿ ಪತ್ನಿಗೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆ ಉಚಿತವಾಗಿ ಡೆಲಿವರಿ ವ್ಯವಸ್ಥೆ ಮಾಡಿತ್ತು. ರೇಣುಕಾ ಕುಟುಂಬಕ್ಕೆ ಆಧಾರವಾಗಿದ್ದ. ಇದೀಗ ಆತನ ಸಾವಿನ ನಂತರ ಕುಟುಂಬ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಈ ಕಾರಣಕ್ಕೆ ಖಾಸಗಿ ಆಸ್ಪತ್ರೆಯೊಂದು ಉಚಿತವಾಗಿ ಹೆರಿಗೆ ಮಾಡಿಸಲು ಮುಂದಾಯಿತು.

ಮೊಮ್ಮಗುವಿನ ಆಗಮನದ ನಂತರ ಮಾಧ್ಯಮಗಳ ಮುಂದೆ ಮಾತನಾಡಿದ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ, ಮಗನನ್ನೇ ನೋಡಿದಷ್ಟು ಸಂತೋಷವಾಯಿತು ಎಂದಿದ್ದಾರೆ. ಇನ್ನೊಂದೆಡೆ ಉಚಿತವಾಗಿ ಹೆರಿಗೆ ಮಾಡಿಸಿಕೊಟ್ಟ ಆಸ್ಪತ್ರೆಗೂ ಧನ್ಯವಾದ ಸಲ್ಲಿಸಿದ್ದಾರೆ.

ಆದರೆ ರೇಣುಕಾಗೆ ಮಗುವಾಗಿರುವ ಸುದ್ದಿ ತಿಳಿಯುತ್ತಿದ್ದಂತೇ ನೆಟ್ಟಿಗರು ಕೆಲವರು ಅವರ ಕುಟುಂಬಸ್ಥರಿಗೆ ಈ ಮಗುವಾದರೂ ಕೆಟ್ಟ ದಾರಿ ಹಿಡಿಯದಂತೆ ನೋಡಿಕೊಳ್ಳಿ ಎಂದು ಸಲಹೆ ಕೊಟ್ಟಿದ್ದಾರೆ. ಮಗುವಿಗೆ ಒಳ್ಳೆಯ ಬುದ್ಧಿ ಕಲಿಸಿಕೊಡಿ, ಆದರ್ಶವಾಗಿ ಹೇಗಿರಬೇಕೆಂದು ಹೇಳಿಕೊಡಿ ಎಂದು ಸಲಹೆಯಿತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments