Publish Date: Thu, 02 Nov 2017 (09:29 IST)
Updated Date: Thu, 02 Nov 2017 (09:31 IST)
ಬೆಂಗಳೂರು: ಕರ್ನಾಟಕ ಖಾಸಗಿ ಆಸ್ಪತ್ರೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಿರುವ ಸರ್ಕಾರ ಕ್ರಮ ವಿರೋಧಿಸಿ ನಾಳೆ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಯಲಿರುವ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ನಾಳೆ ಸೇವೆ ಲಭ್ಯವಿರುವುದು ಅನುಮಾನವಾಗಿದೆ.
ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವವರಿಗೆ ಕಾರ್ಪೋರೇಟ್ ಮತ್ತು ಖಾಸಗಿ ಆಸ್ಪತ್ರೆ, ವೈದ್ಯ ಕಾಲೇಜುಗಳು ಬೆಂಬಲ ನೀಡುವ ಸಂಭವವಿರುವ ಕಾರಣ ಖಾಸಗಿ ಆಸ್ಪತ್ರೆಗಳ ಸೇವೆ ನಾಳೆ ಲಭ್ಯಿವರಲಾರದು ಎನ್ನಲಾಗಿದೆ.
ಮುನ್ನಚ್ಚರಿಕೆ ಕ್ರಮವಾಗಿ ಸರ್ಕಾರಿ ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ನಾಳೆ ಕರ್ತವ್ಯದಲ್ಲಿರುವಂತೆ ಸರ್ಕಾರ ಸೂಚನೆ ನೀಡಿದೆ. ಖಾಸಗಿ ಆಸ್ಪತ್ರೆಗಳ ಅಲಭ್ಯತೆ ಹಿನ್ನಲೆಯಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಸರ್ಕಾರಿ ವೈದ್ಯರಿಗೆ ಸೂಚನೆ ನೀಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ