Webdunia - Bharat's app for daily news and videos

Install App

ದೆಹಲಿ ಸೋಲಿನ ಬೆನ್ನಲ್ಲೇ ಸೋಷಿಯಲ್ ಮೀಡಿಯಾ ಮೋದಿ ಪರ ಎಂದು ಕಿಡಿ ಕಾರಿದ ಪ್ರಿಯಾಂಕ್ ಖರ್ಗೆ

Krishnaveni K
ಭಾನುವಾರ, 9 ಫೆಬ್ರವರಿ 2025 (12:52 IST)
ಬೆಂಗಳೂರು: ದೆಹಲಿಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಕರ್ನಾಟಕ ಕಾಂಗ್ರೆಸ್ ನಾಯಕ, ಸಚಿವ ಪ್ರಿಯಾಂಕ್ ಖರ್ಗೆ ಸೋಷಿಯಲ್ ಮೀಡಿಯಾಗಳು ಮೋದಿ ಪರವಾಗಿದೆ ಎಂದು ದೂರಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು ಬಿಜೆಪಿ 48 ಸ್ಥಾನ ಗೆದ್ದುಕೊಂಡು ಅಧಿಕಾರಕ್ಕೇರುತ್ತಿದೆ. ಈ ನಡುವೆ ಕಾಂಗ್ರೆಸ್ ಒಂದೇ ಒಂದು ಸ್ಥಾನ ಗೆಲ್ಲಲು ವಿಫಲವಾಗಿದೆ. ಇದರ ನಡುವೆಯೇ ಪ್ರಿಯಾಂಕ್ ಖರ್ಗೆ ಇಂತಹದ್ದೊಂದು ಆರೋಪ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಪೇಜ್ ನಲ್ಲಿ ಟ್ವೀಟ್ ಮಾಡಿರುವ ಅವರು ‘ನನಗೆ ಅನಿಸುವ ಪ್ರಕಾರ ಯೂ ಟ್ಯೂಬ್, ಎಕ್ಸ್, ಫೇಸ್ ಬುಕ್ ನಂತಹ ಸೋಷಿಯಲ್ ಮೀಡಿಯಾ ಪೇಜ್ ಗಳು ಮೋದಿ, ಅಮಿತ್ ಶಾ ಅಥವಾ ಬಿಜೆಪಿ ಬಗ್ಗೆ ಟೀಕೆ ಮಾಡುವ ಪೋಸ್ಟ್ ಗಳನ್ನು ತಡೆ ಹಿಡಿಯುತ್ತವೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಮತ್ತು ಸಾರ್ವಜನಿಕರ ಅಭಿಪ್ರಾಯಗಳನ್ನು ದಮನಿಸುವುದು ಅಪಾಯಕಾರಿ ಬೆಳವಣಿಗೆ’ ಎಂದಿದ್ದಾರೆ.

ಅಷ್ಟೇ ಅಲ್ಲ, ಈ ಬೆಳವಣಿಗೆ ಇಂತಹ ಸೋಷಿಯಲ್ ಮೀಡಿಯಾಗಳ ಮೇಲಿನ ವಿಶ್ವಾಸಾರ್ಹತೆಯೇ ಕಡಿಮೆಯಾಗುವಂತೆ ಮಾಡುತ್ತಿದೆ. ಸೋಷಿಯಲ್ ಮೀಡಿಯಾ ಪುಟಗಳು ಪಾರದರ್ಶಕವಾಗಿರಬೇಕಾದ ಅನಿವಾರ್ಯತೆಯಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದಕ್ಕೆ ಸಾಕಷ್ಟು ಟೀಕೆಗಳು ಬಂದಿವೆ. ಕುಣಿಯೋಕೆ ಬಾರದವನು ನೆಲ ಡೊಂಕು ಎಂದನಂತೆ ಎಂದು ಒಬ್ಬರು ಹೇಳಿದರೆ ನಿಮ್ಮ ವಾದಕ್ಕೆ ಏನಾದರೂ ಪುರಾವೆಯಿದೆಯೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments