ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

Krishnaveni K
ಮಂಗಳವಾರ, 21 ಅಕ್ಟೋಬರ್ 2025 (09:22 IST)
Photo Credit: X
ಬೆಂಗಳೂರು: ಆರ್ ಎಸ್ಎಸ್ ವಿರುದ್ಧ ದಿಡೀರ್ ಕೆಂಡ ಕಾರುತ್ತಿರುವ ಪ್ರಿಯಾಂಕ್ ಖರ್ಗೆ ಬಗ್ಗೆ ಈಗ ಪಕ್ಷದೊಳಗೇ ಅಪರಸ್ವರ ಶುರುವಾಗಿದೆ.

ಆರ್ ಎಸ್ಎಸ್ ಚಟುವಟಿಕೆಗಳಿಗೆ ನಿಯಂತ್ರಣ ಹೇರಲು ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಪ್ರಿಯಾಂಕ್ ಖರ್ಗೆ ಅದರಲ್ಲೀಗ ಯಶಸ್ವಿಯೂ ಆಗಿದ್ದಾರೆ. ರಾಜ್ಯ ಸರ್ಕಾರ ಹೊಸದೊಂದು ನಿಯಮ ಜಾರಿಗೆ ತಂದಿದ್ದು ಇನ್ನೀಗ ಆರ್ ಎಸ್ಎಸ್ ಸೇರಿದಂತೆ ಖಾಸಗಿ ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಮಾಡಬೇಕಾದರೆ ಸರ್ಕಾರದ ಒಪ್ಪಿಗೆ ಪಡೆಯಬೇಕು.

ಆದರೆ ಇದರಿಂದಾಗಿ ಈಗ ರಾಜ್ಯದಲ್ಲಿ ಆರ್ ಎಸ್ಎಸ್ ವರ್ಸಸ್ ಪ್ರಿಯಾಂಕ್ ಖರ್ಗೆ ಜಟಾಪಟಿ ತಾರಕಕ್ಕೇರಿದೆ. ಕೆಲವು ಜಿಲ್ಲೆಗಳಲ್ಲಿ ನಾವು ಪಥಸಂಚಲನ ಮಾಡಿಯೇ ತೀರುತ್ತೇವೆ ಎಂದು ಆರ್ ಎಸ್ಎಸ್ ರಂಗಕ್ಕೆ ಧುಮುಕಿದರೆ ಇತ್ತ ಸ್ಥಳೀಯಾಡಳಿತ ಅದಕ್ಕೆ ಒಪ್ಪಿಗೆ ನೀಡದೇ ಸತಾಯಿಸುತ್ತಿದೆ.

ಈ ವಿದ್ಯಮಾನದ ನಡುವೆ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಕೆಲವು ಹಿರಿಯ ನಾಯಕರು ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಒಂದೆಡೆ ರಾಜ್ಯದಲ್ಲಿ ರಸ್ತೆ ಗುಂಡಿ, ಉದ್ಯಮಿಗಳು ಅಸಮಾಧಾನದಿಂದ ಸರ್ಕಾರದ ಮೇಲೆ ಜನರ ಅಸಮಾಧಾನ ಇರುವಾಗ ಇತ್ತ ವಿನಾಕಾರಣ ಆರ್ ಎಸ್ಎಸ್ ಗೂಡಿಗೆ ಕೈ ಹಾಕಿ ಇಲ್ಲದ ವಿವಾದ ಮೈಮೇಲೆಳೆದುಕೊಂಡಂತಾಗಿದೆ ಎಂದು ಕೆಲವು ನಾಯಕರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಆರ್ ಎಸ್ಎಸ್ ಕಾರ್ಯಕ್ರಮಗಳನ್ನು  ನಿಯಂತ್ರಿಸುವ ಕಸರತ್ತು ಈ ಸಂದರ್ಭದಲ್ಲಿ ಬೇಡವಾಗಿತ್ತು ಎಂದು ಕೆಲವರ ಅಭಿಪ್ರಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments