Select Your Language

Notifications

webdunia
webdunia
webdunia
webdunia

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Priyank Kharge
ಬೆಂಗಳೂರು: ಮಸೀದಿ ರಸ್ತೆಯಲ್ಲಿ ಗಣೇಶ ಮೆರವಣಿಗೆ ಹೋದರೆ ಗ್ರಹಚಾರ ಬಿಡಿಸ್ತೀನಿ ಎಂದು ಯುವಕರಿಗೆ ಎಚ್ಚರಿಕೆ ಕೊಟ್ಟ ಪೊಲೀಸ್ ಇನ್ಸ್ ಪೆಕ್ಟರ್ ಧನಂಜಯ್ ಗೆ ಸವಾಲು ಹಾಕಿದ ಮಾಜಿ ಸಂಸದ ಪ್ರತಾಪ್ ಸಿಂಹರನ್ನು ಪೇಟೆ ರೌಡಿ ಎಂದು ಗೃಹಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ.

ಗಣೇಶ ಮೆರವಣಿಗೆ ಹೋಗುವಾಗ ಮಸೀದಿ ರಸ್ತೆಯಲ್ಲಿ ಹೋಗಬಾರದು ಎಂದು ಪೊಲೀಸ್ ಇನ್ಸ್ ಪೆಕ್ಟರ್ ಧನಂಜಯ್ ಎಚ್ಚರಿಕೆ ನೀಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.  ಇದಕ್ಕೆ ಪ್ರತಿಕ್ರಿಯಿಸಿದ್ದ ಪ್ರತಾಪ್ ಸಿಂಹ, ಇನ್ನೊಂದು ಸಲ ಹೀಗೆ ಹೇಳಲಿ, ಠಾಣೆಗೆ ನುಗ್ಗುತ್ತೇವೆ ಎಂದಿದ್ದರು.

ಇದಕ್ಕೀಗ ತಿರುಗೇಟು ನೀಡಿರುವ ಗೃಹಸಚಿವರು, ಮೈಸೂರಿನ ಪೇಟೆ ರೌಡಿಯೊಬ್ಬ ಪೊಲೀಸರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ. ‘ಮೈಸೂರಿನ ಕಡೆಯ "ಪೇಟೆ ರೌಡಿ"ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ.

ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ..

"ಪೊಲೀಸ್ ಠಾಣೆಗೆ ನುಗ್ಗುತ್ತೇನೆ" ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ, ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು!

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲು ಸನ್ನದ್ದವಾಗಿದೆ ಗೃಹ ಇಲಾಖೆ, ಸೂಕ್ಷ್ಮ ಸಂದರ್ಭಗಳನ್ನು ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪೊಲೀಸರ ನೈತಿಕ ಸ್ಥೈರ್ಯ ಕಸಿಯಲು ಬಿಡುವುದಿಲ್ಲ’ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ