ನನ್ನ ಬೈಟ್ ತಗೊಳ್ಳಿ ಎಂದು ಪತ್ರಕರ್ತರಿಗೆ ಪ್ರತಾಪ್ ಸಿಂಹ ಅಂಗಲಾಚ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Krishnaveni K
ಶನಿವಾರ, 25 ಅಕ್ಟೋಬರ್ 2025 (09:28 IST)
ಬೆಂಗಳೂರು: ಪ್ರತಿನಿತ್ಯ ಸುದ್ದಿಯಲ್ಲಿರಲು ನನ್ನ ಬೈಟ್ಸ್ ತಗೊಳ್ಳಿ ಎಂದು ಸ್ವತಃ ಪ್ರತಾಪ್ ಸಿಂಹ ಅವರೇ ಮಾಧ್ಯಮಗಳ ಮುಂದೆ ಅಂಗಲಾಚುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.

ಪಿಯುಸಿ ಫೇಲಾದ ಮಗನಿಗೆ ಮಲ್ಲಿಕಾರ್ಜುನ ಖರ್ಗೆ ಐಟಿ ಬಿಟಿ ಖಾತೆ ಕೊಟ್ಟು ಬೆಂಗಳೂರಿಗೆ ಕೆಟ್ಟ ಹೆಸರು ತಂದ್ರು ಎಂದು ಪ್ರತಾಪ್ ಸಿಂಹ ಲೇವಡಿ ಮಾಡಿದ್ದರು. ಇದಕ್ಕೀಗ ಪ್ರಿಯಾಂಕ್ ಖರ್ಗೆ ತಿರುಗೇಟು ಕೊಟ್ಟಿದ್ದಾರೆ.

‘ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರಲು ಸಲುವಾಗಿ ಮೈಸೂರಿನ ಪತ್ರಕರ್ತರ ಕೈಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತಗೋಳಿ ಅಂತ ಅಂಗಲಾಚುತ್ತಿದ್ದಾರೆ ಎಂಬುದು ಮಾಧ್ಯಮ ಮಿತ್ರರ ಆಫ್ ದಿ ರೆಕಾರ್ಡ್ ವರದಿ’ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ ಮಾಡಿದ್ದಾರೆ.

‘ಎಲ್ಲಾ ವಿಷಯಕ್ಕೂ ಬಾಯಿ ಹಾಕುವ ಪ್ರತಾಪ್ ಸಿಂಹರವರು ಬಿಜೆಪಿ ಪಕ್ಷದ ಯಾವ “ಪೊಸಿಷನ್”ನಲ್ಲಿದ್ದಾರೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು!

ನನ್ನ ಅರ್ಹತೆಯನ್ನು ಪ್ರಶ್ನಿಸುವ ಪ್ರತಾಪ್ ಸಿಂಹರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರಿಗೆ ಅರ್ಹತೆ ಇಲ್ಲದ್ದಕ್ಕೆ ಅಲ್ಲವೇ? ನನ್ನ ಅರ್ಹತೆಯ ಬಗ್ಗೆ, ಇಲಾಖೆಗಳಲ್ಲಿ ನನ್ನ ಕಾರ್ಯವೈಖರಿಯ ಬಗ್ಗೆ ನಾನು ಹೇಳಿಕೊಳ್ಳುವುದಕ್ಕಿಂತ ಬಿಜೆಪಿಯ ಕೇಂದ್ರ ಸರ್ಕಾರದ ದಾಖಲೆಗಳು, ಅಂಕಿ ಅಂಶಗಳು ಹೇಳುತ್ತವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments