Daily Horoscope
✕

ಪ್ರಿಯಾಂಕ್‌ ಖರ್ಗೆಗೆ ಅಪ್ರಸ್ತುತ ಹೇಳಿಕೆ ಕೊಟ್ಟು ಪ್ರಚಾರದಲ್ಲಿರುವ ಗೀಳು: ಅಶ್ವಥ್ ನಾರಾಯಣ್ ವ್ಯಂಗ್ಯ

Sampriya
ಸೋಮವಾರ, 13 ಅಕ್ಟೋಬರ್ 2025 (16:30 IST)
ಬೆಂಗಳೂರು: ಸನ್ಮಾನ್ಯ ಪ್ರಿಯಾಂಕ್ ಖರ್ಗೆ ಯಾವಾಗಲೂ ಅಪ್ರಸ್ತುತ ಹೇಳಿಕೆ ಕೊಟ್ಟು ಸುದ್ದಿಯಲ್ಲಿರುವ ಮಂತ್ರಿ. ಅವರಿಗೆ ಯಾವಾಗಲೂ ಪ್ರಚಾರದಲ್ಲಿರುವ ಗೀಳು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್ ವ್ಯಂಗ್ಯವಾಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ವಿಚಾರವಾಗಿ ಬಿಜೆಪಿ ಕಚೇರಿಯಲ್ಲಿ ತಿರುಗೇಟು ನೀಡಿದರು.

ರಾಜ್ಯ ಸರ್ಕಾರಕ್ಕೆ ನೈತಿಕತೆ ಇದ್ದರೆ ಪ್ರಿಯಾಂಕ್ ಖರ್ಗೆ ಮೇಲೆ ಕೇಸ್ ದಾಖಲಿಸಲಿ. ಇಂತಹ ಘನಂದಾರಿ ಕೆಲಸ ಮಾಡಿರುವ ಪ್ರಿಯಾಂಕ್ ಖರ್ಗೆಯವರನ್ನು ಪತ್ರ ನೀಡಿದ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ವಜಾ ಮಾಡಬೇಕಿತ್ತು ಎಂದಿದ್ದಾರೆ. 


ಪ್ರಿಯಾಂಕ್ ಖರ್ಗೆ ಅವರಿಗೆ ಏನು ಮಾತಾಡುತ್ತಿದ್ದಾರೆ ಅನ್ನೋದೇ ಅವರಿಗೆ ಗೊತ್ತಿಲ್ಲ. ದುರುದ್ದೇಶದಿಂದ ಸಿಎಂಗೆ ಈ ಪತ್ರವನ್ನು ಬರೆದಿದ್ದಾರೆ. ಈ ವ್ಯಕ್ತಿ ಯಾವಾಗಲೂ ಅಪ್ರಸ್ತುತ ಮಾತು ಹಾಗೂ ಕೆಲಸ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.  

ಅವರಿಗೆ ಮಲ್ಲಿಕಾರ್ಜುನ ಖರ್ಗೆಯವರ ಮಗ ಎನ್ನುವುದಷ್ಟೇ ಅರ್ಹತೆ. ಜ್ಞಾನ ಇಲ್ಲದಿದ್ದರೂ ಕುಳಿತಲ್ಲೇ ಅಧಿಕಾರ ಮಾಡುತ್ತಾರೆ. ಬರೀ ವಂಶಪಾರಂಪರ್ಯವಾಗಿ ಬಂದಿರುವವರಿಗೆ ಯಾವ ಅರ್ಹತೆ ಇದೆ. ನಿಮ್ಮ ಸಾಧನೆ ಹಾಗೂ ಕೆಲಸ ಮಾತಾಡಬೇಕು. ಪ್ರಿಯಾಂಕ್ ಖರ್ಗೆ ಅವರೇ ಸಮಾಜ ಒಡೆಯುವ ಕೆಲಸ ಮಾಡಬೇಡಿ ಎಂದು ಕಿಡಿಕಾರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನೆಯ ನೆಲದ ಅಡಿಯಿಂದ ವಿಚಿತ್ರ ಶಬ್ದ: ರಹಸ್ಯ ಭೇದಿಸಲು ನೆಲ ಅಗೆದ ಮಾಲೀಕನಿಗೆ ಕಾದಿತ್ತು ಬಿಗ್ ಶಾಕ್ Video

ನನ್ನನ್ನೇ ಫೇಲ್ ಮಾಡಿದ್ರಾ… ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ತರಗತಿಯಲ್ಲೇ ಈ ವಿದ್ಯಾರ್ಥಿ ಶಿಕ್ಷಕಿಗೆ ಮಾಡಿದ್ದು ನೋಡಿದ್ರೆ ಶಾಕ್

ಯುವತಿಯನ್ನು ಕೂದಲು ಹಿಡಿದು ದರ ದರ ಎಳೆದ ವ್ಯಕ್ತಿ: ಕೋಲ್ಕತ್ತಾದಲ್ಲಿ ಶಾಕಿಂಗ್ ಘಟನೆ Video

ವ್ಯಾನಿಟಿ ಬ್ಯಾಗ್ ನಿಂದ ಮೊಬೈಲ್ ಕದ್ದ ಕಳ್ಳಿ: ಜುಟ್ಟು ಹಿಡಿದು ಕಿತ್ತಾಡಿದ ಮಹಿಳೆಯರು Video

ಗಾತ್ರ ಮುಖ್ಯವಲ್ಲ ಗತ್ತು ಮುಖ್ಯ… ಆನೆಗಳ ಜಗಳ ಬಿಡಿಸಲು ಹೋದ ನಾಯಿ: ಫನ್ನಿ Video

ಮುಂದಿನ ಸುದ್ದಿ
Show comments