Publish Date: Sun, 28 Jun 2026 (09:51 IST)
Updated Date: Sun, 28 Jun 2026 (09:55 IST)
ಬೆಂಗಳೂರು: ಆರ್‌ಎಸ್‌ಎಸ್ ಹಾಗೂ ಕಾರ್ಯಕರ್ತರ ವಿರುದ್ಧ ಅವಹೇಳನಕಾರಿ ಹಾಗೂ ಮಾನಹಾನಿಕಾರ ಹೇಳಿಕೆ ನೀಡಿದ ಆರೋಪ ಸಂಬಂಧ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕರ್ನಾಟಕ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಬೆಂಗಳೂರಿನ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಕ್ರಿಮಿನಲ್ ಮಾನಹಾನಿ ದೂರನ್ನು ಪರಿಗಣಿಸಿ ಜುಲೈ 21ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಇಬ್ಬರು ಕಾಂಗ್ರೆಸ್ ನಾಯಕರಿಗೆ ಸೂಚಿಸಿದೆ.
ಈ ಖಾಸಗಿ ದೂರನ್ನು ಬೆಂಗಳೂರಿನ ಸಿದ್ದಾಪುರ ನಿವಾಸಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತ ಎ. ತೇಜಸ್ ಸಲ್ಲಿಸಿದ್ದಾರೆ.
ದೂರಿನಲ್ಲಿ, 2025ರ ಆಗಸ್ಟ್ 14ರಂದು ಪ್ರಿಯಾಂಕ್ ಖರ್ಗೆ ಅವರು ತಮ್ಮ ಅಧಿಕೃತ ಎಕ್ಸ್ (X) ಸಾಮಾಜಿಕ ಜಾಲತಾಣ ಖಾತೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಗುರಿಯಾಗಿಸಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದಲ್ಲದೆ, ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಯೂಟ್ಯೂಬ್ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆರ್‌ಎಸ್‌ಎಸ್ ಕುರಿತು ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದು, ಸಂಘಟನೆಯ ಸಾರ್ವಜನಿಕ ಪ್ರತಿಷ್ಠೆಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇಬ್ಬರೂ ನಾಯಕರು ಉದ್ದೇಶಪೂರ್ವಕವಾಗಿ ಆರ್‌ಎಸ್‌ಎಸ್‌ನ ಘನತೆ ಮತ್ತು ಸಾರ್ವಜನಿಕ ಪ್ರತಿಷ್ಠೆಗೆ ಧಕ್ಕೆ ತರಲು ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ