ಬಿಜೆಪಿಯವರು ಒಮ್ಮೆಯಾದ್ರೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ರಾ, ಹೈಕಮಾಂಡ್ ಗೆ ಕಪ್ಪ ಕೊಟ್ಟಿಲ್ವಾ: ಪ್ರಿಯಾಂಕ್ ಖರ್ಗೆ

Krishnaveni K
ಮಂಗಳವಾರ, 25 ನವೆಂಬರ್ 2025 (15:39 IST)
ಬೆಂಗಳೂರು: ಬಿಜೆಪಿಯವರು ಒಮ್ಮೆಯಾದ್ರೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದರಾ? ಹೈಕಮಾಂಡ್ ಗೆ ಕಪ್ಪ ಕೊಟ್ಟೇ ಅಲ್ವಾ ಅವರ ನಾಯಕರು ಸಿಎಂ ಆಗಿದ್ದು.. ಹೀಗಂತ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಡಿಕೆ ಶಿವಕುಮಾರ್ ಸಿಎಂ ಆಗಲು ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಅವರು ಈ ರೀತಿ ತಿರುಗೇಟು ನೀಡಿದ್ದಾರೆ. ‘ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ?
ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ?

ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು ಬದಲಿಸಿ, ಎರಡನೇ ಅಧಿಕಾರಾವಧಿಯಲ್ಲಿ 2 ಮುಖ್ಯಮಂತ್ರಿಗಳನ್ನು ಬದಲಿಸಿದ ಹಾಗೂ ಆಪರೇಷನ್ ಕಮಲವೆಂಬ ಕರ್ನಾಟಕ ರಾಜಕಾರಣದ ಕರಾಳ ಅದ್ಯಾಯವನ್ನು ಆರಂಭಿಸಿದ ಬಿಜೆಪಿ ಪಕ್ಷದವರಿಗೆ ಕಾಂಗ್ರೆಸ್ ಹೆಸರೆತ್ತುವುದಕ್ಕೆ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ.

“ಹೈಕಮಾಂಡ್ ಕಪ್ಪ“ದ ಬಗ್ಗೆ ಬಹಳ ಆಸಕ್ತಿಯಿಂದ ಮಾತನಾಡುವ ಬಿಜೆಪಿ,
ಯಡಿಯೂರಪ್ಪನವರು ಹೈಕಮಾಂಡಿಗೆ ಎಷ್ಟು ಕಪ್ಪ ಕೊಟ್ಟು ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು? ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸವರಾಜ್ ಬೊಮ್ಮಯಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್ಯಮಂತ್ರಿಗಳಾದರು ಎಂಬ ಪ್ರಶ್ನೆಗಳಿಗೆ ಉತ್ತರಿಸುವುದೇ?’ ಎಂದು ಪ್ರಶ್ನೆ ಮಾಡಿದ್ದಾರೆ.

‘ಈ ಪ್ರಶ್ನೆಗಳು ನಮ್ಮದಲ್ಲ, ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆ ಎಂಬುದು “ಪೇಮೆಂಟ್ ಸೀಟ್“ ಎಂದು ಯತ್ನಾಳ್ ಅವರೇ ಹೇಳಿದ್ದರು. ಮಂತ್ರಿಗಿರಿಗೆ 70ರಿಂದ 80 ಕೋಟಿ ವಸೂಲಿಯಾಗಿತ್ತು ಎಂಬ ಸತ್ಯವನ್ನೂ ಬಿಜೆಪಿಯವರೇ ಬಹಿರಂಗಪಡಿಸಿದ್ದರು.

ಬಿಜೆಪಿಯವರ ಈ ಎಲ್ಲಾ ವಿಚಾರಗಳು ಉತ್ತರ ಸಿಗದ ಪ್ರಶ್ನೆಗಳಾಗಿಯೇ ಉಳಿದಿವೆ, ಜನತೆಗೆ ಉತ್ತರಿಸುವ ನೈತಿಕತೆ ತೋರಲಿ’ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆಗಿಂತ ಮೊದಲು ಪ್ರಿಯಾಂಕ್ ಭೇಟಿಯಾದ ರಾಹುಲ್ ಗಾಂಧಿ: ಮಹತ್ವದ ಬೆಳವಣಿಗೆ

ಡಿಕೆಶಿ, ಸಿದ್ದು ಕುರ್ಚಿ ಸಮರದಲ್ಲಿ ಹೈಕಮಾಂಡ್ ಗೆ ಕಾಡುತ್ತಿದೆಯಾ ಹಿಂದಿನ ಆ ವಿಚಾರ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮುಂದಿನ ಸುದ್ದಿ
Show comments