Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

Krishnaveni K
ಬುಧವಾರ, 15 ಅಕ್ಟೋಬರ್ 2025 (12:20 IST)
ಬೆಂಗಳೂರು: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಸಚಿವ ಪ್ರಿಯಾಂಕ್ ಖರ್ಗೆ ಅಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಈ  ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆರ್ ಎಸ್ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂದು ಸಿಎಂಗೆ ಪತ್ರ ಬರೆದ ನಂತರ ನನಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದಿದ್ದ ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ಎಂದರೆ ವೈರಸ್ ಇದ್ದಂತೆ ಎಂದಿದ್ದರು. ಇದೀಗ ಅಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ..

ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಬಿಜೆಪಿ ನಾಯಕರು ಒಪ್ಪುತ್ತಾರೆಯೇ?

ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ.

ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ.

ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ.

RSS ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ.
ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ.

ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ: ಕಾಡಸಿದ್ದೇಶ್ವರ ಸ್ವಾಮೀಜಿ ಪರ ಆರ್‌ ಅಶೋಕ್ ಬ್ಯಾಟಿಂಗ್

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ಮುಂದಿನ ಸುದ್ದಿ
Show comments