Select Your Language

Notifications

webdunia
webdunia
webdunia
webdunia

ಮಹಿಳೆಯರ ಬಗ್ಗೆ ಮಾತನಾಡೋದು ರವಿಕುಮಾರ್ ಗೆ ಚಟ: ಪ್ರಿಯಾಂಕ್ ಖರ್ಗೆ

Priyank Kharge

Krishnaveni K

ಬೆಂಗಳೂರು , ಶುಕ್ರವಾರ, 4 ಜುಲೈ 2025 (11:16 IST)
ಬೆಂಗಳೂರು: ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಹಗುರ ಪದ ಬಳಸಿ ಮಾತನಾಡಿದ ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಮಹಿಳೆಯರ ಬಗ್ಗೆ ಮಾತನಾಡೋದೇ ರವಿಕುಮಾರ್ ಗೆ ಚಟ ಎಂದಿದ್ದಾರೆ.

ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಹಗಲಿಡೀ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದು ಎನ್ ರವಿಕುಮಾರ್ ಅಶ್ಲೀಲ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಕಾಂಗ್ರೆಸ್ ದೂರು ಕೂಡಾ ನೀಡಿದೆ.

ಇದರ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ ‘ಬಿಜೆಪಿಯವರು ಕೇಳುವ ಕ್ಷಮೆಯು ಪಶ್ಚಾತಾಪದ ಕ್ಷಮೆಯಲ್ಲ, ಪಲಾಯನವಾದದ ಕ್ಷಮೆ ಎನ್ನುವುದನ್ನು ನಾನು ಹಿಂದೆಯೇ ಹೇಳಿದ್ದೆ,

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನಾಲಿಗೆ ಹರಿಬಿಟ್ಟು ಕ್ಷಮೆ ಕೇಳಿದ್ದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ಈಗ ಮತ್ತೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ತಮ್ಮ ಮಲಿನ ಮನಸಿನ ಕೊಳಕು ನಾಲಿಗೆ ಹರಿಬಿಟ್ಟಿದ್ದಾರೆ.

ಮಹಿಳಾ ಅಧಿಕಾರಿಗಳನ್ನು ನಿಂದಿಸುವುದು ರವಿಕುಮಾರ್ ಅವರಿಗೆ ಚಟವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಮಾನಸಿಕ ಚಿಕಿತ್ಸೆಯ ಅಗತ್ಯವಿದೆ ಎಂಬುದು ನನ್ನ ಭಾವನೆ.

ಮಾಡಿದ ತಪ್ಪನ್ನೇ ಪದೇ ಪದೇ ಮಾಡುವುದು, ಮತ್ತೆ ಮತ್ತೆ ಕ್ಷಮೆ ಕೇಳುವುದು ಬಿಜೆಪಿಯವರಿಗೆ ಸಾವರ್ಕರ್ ರಿಂದ ಬಂದ ರಕ್ತಗತ ಗುಣ ಇರಬಹುದು!
ಮಹಿಳಾ ಅಧಿಕಾರಿಗಳನ್ನೇ ಈ ಪರಿ ನಿಂದಿಸುವ ಬಿಜೆಪಿಯವರು ಸಾಮಾನ್ಯ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳಬಹುದು?

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿರುವ ರವಿಕುಮಾರ್ ಅವರು ಘನತೆಯುಕ್ತ ಪರಿಷತ್ ನಲ್ಲಿ ಮುಂದುವರೆಯಲು ಅನರ್ಹರು.

ರವಿಕುಮಾರ್ ಇರಬೇಕಾಗಿರುವುದು ಪರಿಷತ್ ನಲ್ಲಿ ಅಲ್ಲ, ನಿಮ್ಹಾನ್ಸ್ ನಲ್ಲಿ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ