Publish Date: Sun, 17 May 2026 (17:54 IST)
Updated Date: Sun, 17 May 2026 (17:58 IST)
ಬೆಂಗಳೂರು: ನೀಟ್ 2026 ಪ್ರಶ್ನೆಪತ್ರಿಕೆ ಅಕ್ರಮದಲ್ಲಿ ಆರ್‌ಎಸ್‌ಎಸ್, ಬಿಜೆಪಿ ಕೈವಾಡವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವುದು ಬಹಳ ದೊಡ್ಡ ದುರಂತವಾಗಿದೆ. ಇನ್ನೂ ಈ ಅಕ್ರಮದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ನವರ ಕೈವಾಡವಿದೆ ಎಂದು ಆರೋಪ ಮಾಡಿದರು.
ಇನ್ನೂ ಅಕ್ರಮ ಸಂಬಂಧ ಯಾಕೆ ಇನ್ನೂ ಒಬ್ಬರೂ ರಾಜೀನಾಮೆ ಕೊಡ್ತಿಲ್ಲ? ಹಗಲಿರುಳು ಓದಿದ ಮಕ್ಕಳ ಭವಿಷ್ಯ ಏನಾಗಬೇಕು ಎಂದು ಪ್ರಶ್ನೆ ಮಾಡಿದರು. ಈ ಸಂಬಂಧ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಝೆನ್-ಝೀ ಅಂತಾ ಮೋದಿ ಹೇಳ್ತಾರೆ, ಪರೀಕ್ಷೆ ಮೇಲೆ ಚರ್ಚೆ, ನೀಟ್ ಬಗ್ಗೆ ಪ್ರಧಾನಿ ಮೋದಿ ಯಾವಾಗ ಚರ್ಚೆ ಮಾಡುತ್ತಾರೆ ಎಂದು ಪ್ರಶ್ನೆ ಮಾಡಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ