ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

Krishnaveni K
ಗುರುವಾರ, 23 ಅಕ್ಟೋಬರ್ 2025 (09:32 IST)

ಬೆಂಗಳೂರು: ಬಿಜೆಪಿಯವರ ಬ್ರಹ್ಮಾಂಡ ಭ್ರಷ್ಟಾಚಾರದ ಕತೆ ಹೇಳಲು ಮೂರು ಹಗಲು, ಮೂರು ರಾತ್ರಿ ಸಾಲದು ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ ಮಾಡಿದ್ದಾರೆ.

ಪ್ರಚಾರದ ಹುಚ್ಚಿಗೆ ಬಿದ್ದಿರುವ ಪ್ರಿಯಾಂಕ್ ಖರ್ಗೆ ಬಿಜೆಪಿ ಬಗ್ಗೆ ಸುಳ್ಳು ಕತೆ ಸೃಷ್ಟಿಸಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಕ್ಕೆ ಅವರು ಈ ರೀತಿ ತಿರುಗೇಟು ನೀಡಿದ್ದಾರೆ.

‘ಅಶೋಕ್ ಅವರೇ, ಮೂರು ಹಗಲು ಮೂರು ರಾತ್ರಿಯಲ್ಲಿ ಮಹಾಭಾರತದ ಕತೆಯನ್ನಾದರೂ ಹೇಳಿ ಮುಗಿಸಬಹುದು, ಆದರೆ ಬಿಜೆಪಿಯ ಭ್ರಷ್ಟಾಚಾರದ ಕತೆಗಳನ್ನು ಹೇಳಿ ಮುಗಿಸಲಾಗದು.

 

ಮಾನ್ಯ ಅಶೋಕ್ ಅವರು ತಮ್ಮ ಪಕ್ಷದ ಇತರ ನಾಯಕರ ಮೇಲಿರುವ ಕೋಪವನ್ನು ತೀರಿಸಿಕೊಳ್ಳಲೆಂದೇ ನಮ್ಮನ್ನು ಕೆಣಕುತ್ತಿದ್ದಾರೆ ಎನಿಸುತ್ತದೆ! ನಿಮ್ಮದೇ ಪಕ್ಷದವರಾಗಿದ್ದ "ಬಿಜೆಪಿಯ ವಿಷಲ್ ಬ್ಲೋವರ್" ಖ್ಯಾತಿಯ ಯತ್ನಾಳ್ ಅವರು ಹೇಳಿರುವ ಸಂಗತಿಗಳಿಗೆ ಉತ್ತರವಿದೆಯೇ?

ಈಶ್ವರಪ್ಪನವರ ನಂತರ ನೋಟ್ ಕೌಂಟಿಂಗ್ ಮೆಷಿನ್ ಇಟ್ಟಿದ್ದ ಖ್ಯಾತಿಗೆ ಯಡಿಯೂರಪ್ಪನವರ ಆಪ್ತ ಪಾತ್ರರಾಗಿದ್ದಾರೆ, ಈ ನೋಟ್ ಕೌಂಟಿಂಗ್ ಮೆಷಿನ್ ನ ಮಾಲೀಕರು ಯಾರು? ಜಗನ್ನಾಥ ಭವನವಾ? ಅಥವಾ ಕೇಶವ ಕೃಪನಾ?

ನಿಮ್ಮ ಪಕ್ಷದ ಅಧ್ಯಕ್ಷರು ಮೇಲಿಂದ ಮೇಲೆ ಮಾರಿಷಸ್, ದುಬೈ ದೇಶಗಳಿಗೆ ಹೋಗುವುದೇಕೆ, ಅಲ್ಲಿ ಎಷ್ಟು ಆಸ್ತಿಗಳನ್ನು ಮಾಡಿದ್ದಾರೆ ? ಈ ಪ್ರಶ್ನೆಗಳನ್ನು ನಿಮ್ಮವರೆ ಕೇಳಿದ್ದಾರೆ, ಇದಕ್ಕೆ ಉತ್ತರ ಹೇಳಿ.

ಒಬ್ಬ ಬಸ್ ಕಂಡಕ್ಟರ್ ಮನೆಯಲ್ಲಿ ಸಾವಿರಾರು ಕೋಟಿ ಹಣ ಸಿಗುವಂತಹ ಪವಾಡ ನಡೆಯಲು ಕಾರಣವಾಗಿದ್ದು ಯಾರು, ಇದು ಹೇಗೆ ಸಾಧ್ಯವಾಯ್ತು? ದಯವಿಟ್ಟು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಿವಮೊಗ್ಗ ಸಂಸದರಿಂದ ಉತ್ತರವನ್ನು ಪಡೆದು ಜನರಿಗೆ ತಿಳಿಸಿ’ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಜುಮ್ಮೆನ್ನಿಸುತ್ತದೆ ನಾಸಿಕ್‌ನಲ್ಲಿ ಸಂಭವಿಸಿದ ಅಪಘಾತದ ವಿಡಿಯೋ

ಊಟ ಹಾಕಿದ ನನ್ನ ಮರೆತೇ ಬಿಟ್ರು: ಸಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಮೊಹಮ್ಮದ್ ಜುನೈದ್ video

ಈ ವಯಸ್ಸಿನಲ್ಲೂ ಎಚ್‌ಡಿ ಕುಮಾರಸ್ವಾಮಿ, ರೇವಣ್ಣ ಬಾಂಧವ್ಯಕ್ಕೆ ಎಲ್ಲರೂ ಫಿದಾ, Video

ಬರ್ತಡೆಗೆ ವಿಶ್ ಮಾಡಿ ಪ್ರಿಯತಮೆಯ ಮನಗೆಲ್ಲಲು ಬಂದವ ಚರಂಡಿಯಲ್ಲಿ ಕೀ ಹುಡುಕಾಟದಲ್ಲಿ ಅಂತ್ಯವಾಯಿತು, ಏನಿದು ವಿಚಿತ್ರ ಘಟನೆ

ಆಪರೇಷನ್ ಫುಟ್‌ಪಾತ್ ಅಲ್ಲ, ಇದು ಕಾಂಗ್ರೆಸ್ ಸರ್ಕಾರದ ಆಪರೇಷನ್ ಬಡವರ ಹೊಟ್ಟೆ

ಮುಂದಿನ ಸುದ್ದಿ
Show comments