Publish Date: Tue, 04 Nov 2025 (18:54 IST)
Updated Date: Tue, 04 Nov 2025 (18:56 IST)
ಬೆಂಗಳೂರು: ನಿಮ್ಮ ಥರಾ ನಾವು ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ. ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ 14 ನೇ ಸ್ಥಾನಕ್ಕೇರಿಸಿರುವುದು ನಮ್ಮ ಸಾಧನೆ ಎಂದು ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ನಾಯಕ ಆರ್ ಅಶೋಕ್, ಸದಾ ಆರ್ ಎಸ್ಎಸ್ ಜಪ ಮಾಡುವುದು ಬಿಟ್ಟು ಅಭಿವೃದ್ಧಿ ಕಡೆ ಗಮನ ಕೊಡಿ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದರು. ಇದಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ನಮಸ್ತೆ ಟ್ರಂಪ್ ಗಾಗಿ ಗುಜರಾತಿನ ಅಹಮದಾಬಾದ್ ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ.
ಜಿ20 ಶೃಂಗಸಭೆಗಾಗಿ ದೆಹಲಿಯ ಬಡವರಿಗೆ ದಿಗ್ಬಂಧನ ವಿಧಿಸಿ, ಬಡವರನ್ನು, ಬಡತನವನ್ನು ಬಂಧನದಲ್ಲಿಟ್ಟಿದ್ದಂತಹ ದುಃಸ್ಥಿತಿ ಬೆಂಗಳೂರಿಗೆ ಬಂದಿಲ್ಲ.
ಛತ್ ಪೂಜೆಗಾಗಿ ನರ್ಮದಾ ನದಿಯ ಪಕ್ಕದಲ್ಲಿ ಫಿಲ್ಟರ್ ನೀರಿನ ಕೊಳ ನಿರ್ಮಿಸಿ, ನರ್ಮದಾ ನದಿಯ ಅವ್ಯವಸ್ಥೆಯನ್ನು ಮರೆಮಾಚಿದಂತಹ ದುಃಸ್ಥಿತಿ ನಮಗೆ ಒದಗಿ ಬಂದಿಲ್ಲ.
ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ.
ಬೆಂಗಳೂರಿನ ಮಹತ್ವದ ಬಗ್ಗೆ ಬಿಜೆಪಿಯವರಿಗೆ ಅರಿವಿಲ್ಲದಿರಬಹುದು, ಮರ್ಸಿಡಿಸ್ ಬೆಂಜ್ ನ CEOರಿಂದ ಹಿಡಿದು ದೇಶದ ಹೂಡಿಕೆದಾರರವರೆಗೂ ಅದರ ಅರಿವಿದೆ.
ಜಾಗತಿಕ ಸ್ಟಾರ್ಟ್ ಅಪ್ ಎಕೊಸಿಸ್ಟಮ್ ಸೂಚ್ಯಾಂಕದಲ್ಲಿ ಬೆಂಗಳೂರು 14ನೇ ಸ್ಥಾನಕ್ಕೆ ಏರಿರುವುದು ನಮ್ಮ ಕಾರ್ಯವೈಖರಿಗೆ ಹಿಡಿದ ಕನ್ನಡಿ.
ಅಶೋಕ್ ಅವರು ಶಾಖೆಗೆ ಹೋಗಿ ದೊಣ್ಣೆ ಹಿಡಿಯದನ್ನು ಬಿಟ್ಟು ಜಗತ್ತಿನ ಆಗುಹೋಗುಗಳ ಬಗ್ಗೆ, ಬೆಂಗಳೂರಿನ ಹೆಗ್ಗಳಿಕೆಯ ಬಗ್ಗೆ ತಿಳಿಯುವ ಪ್ರಯತ್ನ ನಡೆಸಿದ್ದರೆ ಈ ರೀತಿಯ ಅಪ್ರಬುದ್ಧ ಹೇಳಿಕೆ ನೀಡುತ್ತಿರಲಿಲ್ಲ ಎಂದಿದ್ದಾರೆ.