ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

Krishnaveni K
ಮಂಗಳವಾರ, 4 ನವೆಂಬರ್ 2025 (18:54 IST)
ಬೆಂಗಳೂರು: ನಿಮ್ಮ ಥರಾ ನಾವು ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ. ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ 14 ನೇ ಸ್ಥಾನಕ್ಕೇರಿಸಿರುವುದು ನಮ್ಮ ಸಾಧನೆ ಎಂದು ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.

ಬಿಜೆಪಿ ನಾಯಕ ಆರ್ ಅಶೋಕ್, ಸದಾ ಆರ್ ಎಸ್ಎಸ್ ಜಪ ಮಾಡುವುದು ಬಿಟ್ಟು ಅಭಿವೃದ್ಧಿ ಕಡೆ ಗಮನ ಕೊಡಿ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದರು. ಇದಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

‘ನಮಸ್ತೆ ಟ್ರಂಪ್ ಗಾಗಿ ಗುಜರಾತಿನ ಅಹಮದಾಬಾದ್ ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ.

ಜಿ20 ಶೃಂಗಸಭೆಗಾಗಿ ದೆಹಲಿಯ ಬಡವರಿಗೆ ದಿಗ್ಬಂಧನ ವಿಧಿಸಿ, ಬಡವರನ್ನು, ಬಡತನವನ್ನು ಬಂಧನದಲ್ಲಿಟ್ಟಿದ್ದಂತಹ ದುಃಸ್ಥಿತಿ ಬೆಂಗಳೂರಿಗೆ ಬಂದಿಲ್ಲ.

ಛತ್ ಪೂಜೆಗಾಗಿ ನರ್ಮದಾ ನದಿಯ ಪಕ್ಕದಲ್ಲಿ ಫಿಲ್ಟರ್ ನೀರಿನ ಕೊಳ ನಿರ್ಮಿಸಿ, ನರ್ಮದಾ ನದಿಯ ಅವ್ಯವಸ್ಥೆಯನ್ನು ಮರೆಮಾಚಿದಂತಹ ದುಃಸ್ಥಿತಿ ನಮಗೆ ಒದಗಿ ಬಂದಿಲ್ಲ.

ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ.
ಬೆಂಗಳೂರಿನ ಮಹತ್ವದ ಬಗ್ಗೆ ಬಿಜೆಪಿಯವರಿಗೆ ಅರಿವಿಲ್ಲದಿರಬಹುದು, ಮರ್ಸಿಡಿಸ್ ಬೆಂಜ್ ನ CEOರಿಂದ ಹಿಡಿದು ದೇಶದ ಹೂಡಿಕೆದಾರರವರೆಗೂ ಅದರ ಅರಿವಿದೆ.

ಜಾಗತಿಕ ಸ್ಟಾರ್ಟ್ ಅಪ್ ಎಕೊಸಿಸ್ಟಮ್ ಸೂಚ್ಯಾಂಕದಲ್ಲಿ ಬೆಂಗಳೂರು 14ನೇ ಸ್ಥಾನಕ್ಕೆ ಏರಿರುವುದು ನಮ್ಮ ಕಾರ್ಯವೈಖರಿಗೆ ಹಿಡಿದ ಕನ್ನಡಿ.

ಅಶೋಕ್ ಅವರು ಶಾಖೆಗೆ ಹೋಗಿ ದೊಣ್ಣೆ ಹಿಡಿಯದನ್ನು ಬಿಟ್ಟು ಜಗತ್ತಿನ ಆಗುಹೋಗುಗಳ ಬಗ್ಗೆ, ಬೆಂಗಳೂರಿನ ಹೆಗ್ಗಳಿಕೆಯ ಬಗ್ಗೆ ತಿಳಿಯುವ ಪ್ರಯತ್ನ ನಡೆಸಿದ್ದರೆ ಈ ರೀತಿಯ ಅಪ್ರಬುದ್ಧ ಹೇಳಿಕೆ ನೀಡುತ್ತಿರಲಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಹೃದಯದ ಆರೋಗ್ಯಕ್ಕೆ ಡಾ ದೇವಿಪ್ರಸಾದ್ ಶೆಟ್ಟಿಯವರ ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಮುಂದಿನ ಸುದ್ದಿ
Show comments