Select Your Language

Notifications

webdunia
webdunia
webdunia
webdunia

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

Priyank Kharge

Krishnaveni K

ಕಲಬುರಗಿ , ಗುರುವಾರ, 13 ನವೆಂಬರ್ 2025 (17:45 IST)
ಕಲಬುರಗಿ: ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಸಂಘಕ್ಕೆ ಈಗ ಸಂವಿಧಾನದ ಮಹತ್ವ ಅರಿವಾಗಿರಬಹುದು ಎಂದಿದ್ದಾರೆ.

ನವಂಬರ್ 16 ರಂದು ಷರತ್ತುಗಳೊಂದಿಗೆ ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ!

ಆರ್ಎಸ್ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ.

ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್ಎಸ್ಎಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ.

300 ಜನರು ಮಾತ್ರ ಭಾಗವಹಿಸಬೇಕು, ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ, ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ, ಮತ್ತು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ.

ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು’ ಎಂದು ಖಡಕ್ ಆಗಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್