Publish Date: Tue, 21 Oct 2025 (13:41 IST)
Updated Date: Tue, 21 Oct 2025 (13:43 IST)
ಬೆಂಗಳೂರು: ಬಿಜೆಪಿ ನಾಯಕರು ಹೈಕಮಾಂಡ್ ಗೆ ಕಪ್ಪ ಕೊಟ್ಟ ಬಗ್ಗೆ ಪ್ರಿಯಾಂಕ್ ಖರ್ಗೆ ಇಂದು ಸ್ಪೋಟಕ ಟ್ವೀಟ್ ಮಾಡಿದ್ದನ್ನು ಹಳೆಯದನ್ನು ನಾವು ಮರೆತಿಲ್ಲ ಎಂದಿದ್ದಾರೆ.
ಈ ಹಿಂದೆಎ ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ನಡುವಿನ ಮಾತುಕತೆಯ ವಿಡಿಯೋವೊಂದನ್ನು ಪ್ರಕಟಿಸಿರುವ ಪ್ರಿಯಾಂಕ್ ಖರ್ಗೆ, ಹೈಕಮಾಂಡ್ ಗೆ ಕಪ್ಪ ಕೊಡುವ ಸಂಪ್ರದಾಯ ಬಿಜೆಪಿಯವರದ್ದು ಎಂದು ಟೀಕಿಸಿದ್ದಾರೆ.
ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಶ್ರೀ ಯಡಿಯೂರಪ್ಪನವರು ಹಾಗೂ ದಿ. ಶ್ರೀ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ.
ಸಂಸದ ಬಿ.ವೈ ರಾಘವೇಂದ್ರರವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ.
ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.