ವಯನಾಡು: ರಾಹುಲ್ ಗಾಂಧಿಯಿಂದ ತೆರವಾಗಿರುವ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಇಂದು ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದಕ್ಕಾಗಿ ಅವರು ನಿನ್ನೆಯೇ ಮೈಸೂರಿಗೆ ಬಂದಿದ್ದಾರೆ.
ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ವಯನಾಡಿಲ್ಲಿ ಪ್ರಿಯಾಂಕ ರೋಡ್ ಶೋ ನಡೆಸಲಿದ್ದಾರೆ.
ರೋಡ್ ಶೋ ಬಳಿಕ ಕಲ್ಪೆಟ್ಟಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಮಧ್ಯಾಹ್ನ 12.30 ರ ಸುಮಾರಿಗೆ ಕಲ್ಪೆಟ್ಟಾ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಪ್ರಿಯಾಂಕ ವಾದ್ರಾಗೆ ಇದು ಮೊದಲ ಸ್ಪರ್ಧಾತ್ಮಕ ಚುನಾವಣೆಯಾಗಿದೆ.
ಇದಕ್ಕೆ ಮೊದಲು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರೂ ಪ್ರಿಯಾಂಕ ಸ್ವತಃ ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಆದರೆ ಈಗ ಸಹೋದರ ರಾಹುಲ್ ರಿಂದ ತೆರವಾಗಲಿರುವ ಸ್ಥಾನಕ್ಕೆ ತಾವೇ ಸ್ಪರ್ಧಿಸಲು ಹೊರಟಿದ್ದಾರೆ. ಪ್ರಿಯಾಂಕ ವಾದ್ರಾಗೆ ತಾಯಿ ಸೋನಿಯಾ ಗಾಂಧಿ ಕೂಡಾ ಸಾಥ್ ನೀಡುತ್ತಿದ್ದಾರೆ.