Select Your Language

Notifications

webdunia
webdunia
webdunia
webdunia

ಬರ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಪ್ರೀಯಾಂಕ ಖರ್ಗೆ

ಪ್ರೀಯಾಂಕ ಖರ್ಗೆ

geetha

bangalore , ಗುರುವಾರ, 7 ಮಾರ್ಚ್ 2024 (20:12 IST)
ಬೆಂಗಳೂರು-ಜಿಲ್ಲಾಡಳಿತ ಭವನದಲ್ಲಿ ಬುಧವಾರ ಬರ ನಿರ್ವಹಣೆ ಕುರಿತ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಪ್ರೀಯಾಂಕ ಖರ್ಗೆ ಮುಂದಿನ ಎರಡು ಮೂರು ತಿಂಗಳ ಅವಧಿಯಲ್ಲಿ ಜನಸಾಮಾನ್ಯರಿಗೆ ಜಾನುವಾರುಗಳಿಗೆ ನೀರು, ಮೇವಿನ ಸಮಸ್ಯೆ ತಲೆದೂರಿದಲ್ಲಿ ಸಮರ್ಪಕವಾಗಿ ಅಧಿಕಾರಿಗಳು ನಿರ್ವಹಣೆ ಮಾಡಬೇಕು. ಜನಸಾಮಾನ್ಯರ ಅಹವಾಲುಗಳಿಗೆ ಸಹಾನುಭೂತಿಯಿಂದ ಸ್ಪಂದಿಸಬೇಕು ಎಂದು ಸೂಚಿಸಿದರು.
 
ವಾಸ್ತವಾಂಶ ಅರಿತು ಕಾರ್ಯನಿರ್ವಹಿಸಿ: ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ವಾರಕ್ಕೊಂಡು ಬಾರಿ ಸಭೆ ನಡೆಸಬೇಕು ಹಾಗೂ ಸ್ಥಳ ಪರಿಶೀಲನೆ ಮಾಡಬೇಕು. ವಾಸ್ತವಾಂಸ ಅರಿಯುವ ಮೂಲಕ ಸಮಸ್ಯೆಯ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು.
 
ಅನುದಾನದ ಕೊರತೆಯಿಲ್ಲ : ಬರ ನಿರ್ವಹಣೆಗಾಗಿ ಅಧಿಕಾರಿಗಳು ಮೊದಲು ಎಸ್.ಡಿ.ಆರ್.ಎಫ್. ಮಾರ್ಗಸೂಚಿಗಳನು ಅರಿತು ಕಾಮಗಾರಿಗಳನು ಕೈಗೆತ್ತಿಕೊಳ್ಳಬೇಕು. ಎಸ್ ಡಿ ಆರ್ ಎಫ್ ಅನುದಾನ ಹಾಗೂ ಮಾರ್ಗಸೂಚಿಯಲ್ಲಿ ಬರದಿದ್ದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಗಳಿಗೆ 850 ಕೋಟಿ ರೂ.ಗಳನ್ನು ಒದಗಿಸಲಾಗಿದ್ದು ಈ ಅನುದಾನದಲ್ಲಿ ಅಗತ್ಯಕ್ಕನುಸಾರ ಕಾಮಗಾರಿಗಳನ್ನು ಕೈಗೊನೀಡಿದ್ದಾರೆ.
 
ಬರ ನಿರ್ವಹಣೆ ಕುರಿತಂತೆ ಈಗಾಗಲೇ ಮಾರ್ಗಸೂಚಿಗಳನ್ನು ಸರ್ಕಾರದಿಂದ ಹೊರಡಿಸಲಾಗಿದೆ ಅಲ್ಲದೇ ಮುಖ್ಯಮಂತ್ರಿಗಳು , ಕಂದಾಯ ಸಚಿವರು, ತೋಟಗಾರಿಕೆ ಸಚಿವರು , ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರುಗಳು ಸೇರಿದಂತೆ ಸರ್ಕಾರದ ಎಲ್ಲ ಸಚಿವರು ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿ ಬರ ನಿರ್ವಹಣೆ ಕುರಿತಂತೆ ಸೂಚನೆಗಳನ್ನು ನೀಡಿದ್ದಾರೆ.
 
ಬರ ನಿರ್ವಹಣೆಗಾಗಿ ಅನುದಾನವನ್ನು ಸಹ ಒದಗಿಸಿದ್ದು ತಾಲೂಕಾ ಹಂತದಲ್ಲಿ ಟಾಸ್ಕ್ ಫೋರ್ಸ ಸಮಿತಿ ಸಭೆಗಳನ್ನು ನಡೆಸಿ ಕಾಮಗಾರಿಗಳನು ಕೈಗೊಳ್ಳುವಂತೆ ಹೇಳಿದರು.ಸಭೆಯಲ್ಲಿ ತೆರಿಗೆ ಸಂಗ್ರಹ, ಕೂಸಿನ ಮನೆ ಕಾಮಗಾರಿ, ನರೇಗಾ ಕಾಮಗಾರಿ, ಗ್ರಂಥಾಲಯಗಳ ಸೌಲಭ್ಯ , ಹಾಸ್ಟೆ ಲ್ ಗಳಿಗೆ ಕುಡಿಯುವ ನೀರು ಪೂರೈಕೆ ಕುರಿತಂತೆ ಚರ್ಚಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಬಿ. ದೇವರಮನಿ, ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಆರ್.ಗೌಡ ಸೇರಿದಂತೆ ಹಲವಾರು ಉಪಸ್ಥಿತರಿದ್ದರು

Share this Story:

Follow Webdunia kannada

ಮುಂದಿನ ಸುದ್ದಿ

ಮಗನಿಗೆ ಜಾಮೀನು ಕೊಡಿಸುವುದಾಗಿ ಹೇಳಿ ತಾಯಿಯ ಮೇಲೆ ನಿರಂತರ ಅತ್ಯಾಚಾರ