Select Your Language

Notifications

webdunia
webdunia
webdunia
Wednesday, 2 April 2025
webdunia

ಎನ್‌ಕೌಂಟರ್‌ ಮಾಡುವುದಾಗಿ ಪ್ರಿಯಾಂಕ ಖರ್ಗೆಗೆ ಜೀವ ಬೆದರಿಕೆ ಪತ್ರ

Priyanka Kharge

Sampriya

ಕಲಬುರ್ಗಿ , ಗುರುವಾರ, 28 ಮಾರ್ಚ್ 2024 (15:34 IST)
Photo Courtesy Priyanka KhargeFacebook
ಕಲಬುರ್ಗಿ: ನನ್ನನ್ನು ಎನ್‌ಕೌಂಟರ್ ಮಾಡಲಾಗುವುದೆಂದು ಜೀವ ಬೆದರಿಕೆ ಪತ್ರ ಬಂದಿದ್ದು, ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲಲು ಬಿಜೆಪಿ ಪ್ಲಾನ್ ಮಾಡಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಆರೋಪ ಮಾಡಿದರು.

ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಬಿಜೆಪಿಯಯವರು  ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಅಲ್ಲದೆ, ತನಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ ಅಲ್ಲದೆ, ಈ ಬೆದರಿಕೆ ಪತ್ರ ಫಿನ್​ಲ್ಯಾಂಡ್​ನಿಂದ ಬಂದಿದೆ ಎಂದು ಹೇಳಿದರು.

ಬಿಜೆಪಿಯವರಿಗೆ ನಮ್ಮನ್ನ ರಾಜಕೀಯವಾಗಿ ಎದುರಿಸಲು ಆಗುತ್ತಿಲ್ಲ. ಹೀಗಾಗೇ ವೈಯಕ್ತಿಕವಾಗಿ ಟಾರ್ಗೇಟ್ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನೂ ಹೆದರುವುದಿಲ್ಲ ಎಂದರು.

ಈ ಸಂಬಂಧ ಮಾರ್ಚ್ 13 ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದೇನೆ. ವಿಕಾಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ರಣಬಿಸಿಲು: ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ