Publish Date: Tue, 03 Dec 2019 (17:02 IST)
Updated Date: Tue, 03 Dec 2019 (17:04 IST)
ತೆಲಂಗಾಣ ರಾಜ್ಯದಲ್ಲಿ ನಡೆದ ಪಶು ವೈದ್ಯೆ ಡಾ.ಪ್ರಿಯಾಂಕ ರೆಡ್ಡಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ವೈದ್ಯೆಯ ಮೇಲೆ ನಡೆದ ಬಲತ್ಕಾರ, ಹತ್ಯೆ ಖಂಡಿಸಿ ಚಿತ್ರದುರ್ಗ ಜಿಲ್ಲಾ ಪಶುವೈದ್ಯಾಧಿಕಾರಿಗಳಿಂದ ಮೌನ ಪ್ರತಿಭಟನಾ ಮೆರವಣಿಗೆ ನಡೆಯಿತು.
ಚಿತ್ರದುರ್ಗ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ವೈದ್ಯರು, ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ರು. ಕೃತ್ಯಕ್ಕೆ ಕಾರಣವಾದವರಿಗೆ ಉಗ್ರ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿದ್ರು.
ಕರ್ನಾಟಕ ಪಶು ವೈದ್ಯಕೀಯ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.