Publish Date: Thu, 12 Nov 2026 (15:36 IST)
Updated Date: Thu, 12 Nov 2026 (15:39 IST)
ಬೆಂಗಳೂರು: ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ ಪ್ರಧಾನಿ ಮೋದಿ ಬರುತ್ತಿರುವ ಬಗ್ಗೆ ಪ್ರಶ್ನೆ ಮಾಡಿದಾಗ ರಾಜ್ಯ ಗೃಹಸಚಿವ ಪ್ರಿಯಾಂಕ್ ಖರ್ಗೆ ಮೋದಿಯವರು ಮಾಳೆ ಬಂದು ಏನು ಮಾಡ್ತಾರೆ. ಟೆಲಿಪ್ರಾಮ್ಟರ್ ಇಟ್ಟಿರ್ತಾರೆ, ಕನ್ನಡದಲ್ಲಿ ಎರಡು ನಮಸ್ಕಾರ, ಶುಭಾಶಯ ಹೇಳಿ ಹೋಗುತ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಹಾಗೂ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನಾ ಕಾರ್ಯಕ್ರಮದ ಬೆನ್ನಲ್ಲೇ, ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ಹಕ್ಕು ಹಾಗೂ ಶ್ರೇಯಸ್ಸಿನ ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರವೇ ಶೇಕಡ 85 ರಷ್ಟು ಬಂಡವಾಳ ಭರಿಸುತ್ತಿದ್ದರೂ, ಕೇಂದ್ರ ಸರ್ಕಾರ ಸಂಪೂರ್ಣ ಕ್ರೆಡಿಟ್ ತೆಗೆದುಕೊಳ್ಳಲು ಯತ್ನಿಸುತ್ತಿದೆ ಎಂದು ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದ ಮಲತಾಯಿ ಧೋರಣೆಯನ್ನು ಕಟುವಾಗಿ ಟೀಕಿಸಿದ್ದಾರೆ.
"ನಾವು ದೇಶದ ಆರ್ಥಿಕ ಇಂಜಿನ್, ಆದರೆ ನಮಗೆ ಸಿಗುತ್ತಿರುವುದೇನು?": ಪ್ರಿಯಾಂಕ್ ಖರ್ಗೆ ಪ್ರಶ್ನೆ
ಕೇಂದ್ರ ಸರ್ಕಾರದ ಧೋರಣೆಯ ಬಗ್ಗೆ ಕಿಡಿಕಾರಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, "ನಾವು ದೇಶಕ್ಕೆ ಅತಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುತ್ತಿದ್ದೇವೆ. ದೇಶದ ಪ್ರಮುಖ ಆರ್ಥಿಕ ಇಂಜಿನ್‌ಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಹೆಚ್ಚಿನ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಪಾವತಿಸುವ ಮೂಲಕ ಕೇಂದ್ರ ಸರ್ಕಾರವನ್ನು ಮುನ್ನಡೆಸಲು ನಾವೇ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದೇವೆ. ನಮ್ಮ ನೀತಿಗಳು ಮತ್ತು ಬಜೆಟ್‌ನಿಂದ ರಾಜ್ಯವು ಅಭಿವೃದ್ಧಿ ಹೊಂದುತ್ತಿದೆ. ಆದರೆ ಬದಲಿಗೆ ನಮಗೆ ಕೇಂದ್ರದಿಂದ ಸಿಗುತ್ತಿರುವುದು ಏನು? ನಾವು ಕೇಳುತ್ತಿರುವುದು ನಮ್ಮ ತೆರಿಗೆಯ ನ್ಯಾಯಯುತ ಪಾಲು ಮಾತ್ರ" ಎಂದು ವಾಗ್ದಾಳಿ ನಡೆಸಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ
ರಾಜ್ಯವು ದೇಶದ ಆರ್ಥಿಕತೆಗೆ ಕೋಟ್ಯಂತರ ರೂಪಾಯಿಗಳನ್ನು ಕೊಡುಗೆಯಾಗಿ ನೀಡುತ್ತಿದ್ದರೂ, ಕೇಂದ್ರದಿಂದ ಬರಬೇಕಾದ ಅನುದಾನ ಮತ್ತು ತೆರಿಗೆ ಪಾಲು ಹಂಚಿಕೆಯಲ್ಲಿ ತಾರತಮ್ಯ ಮುಂದುವರಿದಿದೆ ಎಂದು ರಾಜ್ಯ ಸರ್ಕಾರದ ನಾಯಕರು ಆರೋಪಿಸಿದ್ದಾರೆ. ಮೆಟ್ರೋ ಉದ್ಘಾಟನಾ ವೇದಿಕೆಗಳಲ್ಲಿ ರಾಜ್ಯದ ಸಚಿವರ ಧ್ವನಿಯನ್ನು ಹತ್ತಿಕ್ಕುವುದು ಹಾಗೂ ಸ್ಥಳೀಯ ಕೊಡುಗೆಯನ್ನು ಕಡೆಗಣಿಸುವ ಪ್ರವೃತ್ತಿ ಸರಿಯಲ್ಲ ಎಂದು ಅವರು ಆಕ್ಷೇಪಿಸಿದ್ದು, ಕರ್ನಾಟಕದ ಹಿತಾಸಕ್ಷಿಗಾಗಿ ಹಾಗೂ ನ್ಯಾಯಯುತ ಪಾಲಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ