Webdunia - Bharat's app for daily news and videos

Install App

ರಸ್ತೆ ಅಪಘಾತದಲ್ಲಿ ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಸಾವು: ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

Sampriya
ಸೋಮವಾರ, 2 ಡಿಸೆಂಬರ್ 2024 (14:16 IST)
Photo Courtesy X
ಹಾಸನ: ಕರ್ನಾಟಕ ಕೇಡರ್‌ನ 2023ರ ಸಾಲಿನ ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ಹಾಸನಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹರ್ಷಬರ್ಧನ್ ಮೃತಪಟ್ಟಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ಹಾಸನ-ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಅತ್ಯಂತ ಬೇಸರದ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೇರಿದಂತೆ ರಾಜಕಾರಣಿಗಳು ಮತ್ತು ಹಿರಿಯ ಪೊಲೀಸ್‌ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.


ಮಧ್ಯಪ್ರದೇಶದ ಸಿಂಗ್ರುಲಿ ಜಿಲ್ಲೆಯ ದೋಸಾರ್‌ ಗ್ರಾಮದ ಹರ್ಷಬರ್ಧನ್ ಅವರು ಪ್ರೊಬೇಷನರಿ ಎಎಸ್ಪಿಯಾಗಿ ಹಾಸನಕ್ಕೆ ನಿಯೋಜನೆಗೊಂಡಿದ್ದರು. ಕರ್ತವ್ಯಕ್ಕೆ ಹಾಜರಾಗಲು ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್‌ ಜೀಪ್‌ ಪಕ್ಕದ ಮನೆಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಹರ್ಷಬರ್ಧನ್‌ ಅವರು ಭಾನುವಾರ ಮೃತಪಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments