Select Your Language

Notifications

webdunia
webdunia
webdunia
webdunia

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಪ್ರಕ್ರಿಯೆ

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಪ್ರಕ್ರಿಯೆ
bangalore , ಶುಕ್ರವಾರ, 15 ಅಕ್ಟೋಬರ್ 2021 (21:59 IST)
ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​​ಗೆ ತಿಳಿಸಿದ್ದು, ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಿದೆ.
ಅರ್ಜಿದಾರ ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಮನವಿ ಆಧರಿಸಿ ಎರಡನೇ ಉಪ ಲೋಕಾಯುಕ್ತ ಹುದ್ದೆ ಭರ್ತಿ ಮಾಡುವ ಸಂಬಂಧ ಪ್ರಸಕ್ತ ವರ್ಷದ ಜ.27ರಂದು ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಉಪ ಲೋಕಾಯುಕ್ತರನ್ನು ನೇಮಕ ಮಾಡುವ ಸಂಬಂಧ ಪ್ರಕ್ರಿಯೆ ಆರಂಭಿಸಿದೆ.
ಈ ಸಂಬಂಧ ಸರ್ಕಾರ ಕೈಗೊಂಡ ನಿರ್ಧಾರವನ್ನು ಲಿಖಿತವಾಗಿ ಸಲ್ಲಿಸಲು 3 ವಾರ ಕಾಲಾವಕಾಶ ನೀಡಬೇಕೆಂದು ಸರ್ಕಾರ ಮನವಿ ಮಾಡಿದೆ. ಪ್ರಕರಣದ ವಿಚಾರಣೆಯನ್ನು ನ.8ಕ್ಕೆ ನಿಗದಿಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೆಲ್‌ ಇಂಡಿಯಾ, ಅದರ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ, ಈಗ ಮತ್ತೊಂದು ಹಂತದ ಅಭಿಯಾನ