Select Your Language

Notifications

webdunia
webdunia
webdunia
webdunia

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ಹಾಗೂ ತಪಾಸಣೆ

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ಹಾಗೂ ತಪಾಸಣೆ
bangalore , ಗುರುವಾರ, 28 ಅಕ್ಟೋಬರ್ 2021 (22:14 IST)
ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಗಳಲ್ಲಿ ದೋಷ ಮುಕ್ತ ಅವಧಿ(ಡಿ.ಎಲ್.ಪಿ)ಯಲ್ಲಿರುವ ರಸ್ತೆಗಳನ್ನು ಪಟ್ಟಿಮಾಡಿ, ರಸ್ತೆಗಳ ಸ್ಥಿತಿ ಅವಲೋಕಿಸಿ ಸುಸ್ಥಿತಿಯಲ್ಲಿಲ್ಲದ ರಸ್ತೆಗಳನ್ನು ಗುತ್ತಿಗೆದಾರರಿಂದ ಕೂಡಲೆ ದುರಸ್ತಿಪಡಿಸಬೇಕು ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಶವಂತಪುರ ವಿಧಾನಸಭಾ ಕ್ಷೇತ್ತ ವ್ಯಾಪ್ತಿಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಜಲಮಂಡಳಿ, ಬೆಸ್ಕಾಂ ನಿಂದ ರಸ್ತೆಗಳನ್ನು ಹಗೆದು ತೀರಾ ಆಳಾಗಿರುವ ರಸ್ತೆಗಳನ್ನು ತ್ವರಿತವಾಗಿ ದುರಸ್ತಿ ಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಶವಂತಪುರ ವಿಧಾನಸಭಾ ಕ್ಷೇತ್ತ ವ್ಯಾಪ್ತಿಯಲ್ಲಿ 5 ವಾರ್ಡ್ ಗಳು ಬರಲಿದ್ದು, 110 ಹಳ್ಳಿಗಳ ಪೈಕಿ 19 ಹಳ್ಳಿಗಳು ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಸೇರಲಿವೆ. ಈ ಸಂಬಂಧ ಜಲಮಂಡಳಿ ವತಿಯಿಂದ ನಡೆಯುತ್ತಿರುವ ಕುಡಿಯುವ ನೀರಿನ ಸಂಪರ್ಕ, ಒಳಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಬೆಸ್ಕಾಂ ಅಳವಡಿಸುತ್ತಿರುವ ನೆಲದಡಿ ಕೇಬಲ್ ಕಾಮಗಾರಿಯನ್ನು ಕೂಡ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚನೆ ನೀಡಿದರು.
ಗಾಂಧಿನಗರ ಹೊಸಕೆರೆ ಕೆರೆ ಬಿಬಿಎಂಪಿ ಗೆ ಹಸ್ತಾಂತರ:
ಹೇರೋಹಳ್ಳಿ ವಾರ್ಡ್ ವ್ಯಾಪ್ತಿಯ ಗಾಂಧಿನಗರ ಹೊಸಕೆರೆಯು 43.3 ಎಕರೆ ಪ್ರದೇಶದಲ್ಲಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ 2019ರಲ್ಲಿ ಪಾಲಿಕೆಗೆ ಹಸ್ತಾಂತರವಾಗಿದೆ. ಪ್ರಸ್ತುತ ಕೆರೆಯ ಬಂಡ್ ನಲ್ಲಿ ಕೆರೆಯ ನೀರು ಸೋರಿಕೆಯಾಗುತ್ತಿದ್ದು, ಕೆರೆಯಲ್ಲಿ ನೀರು ಶೇಖರಣೆಯಾಗುತ್ತಿಲ್ಲ. ಜೊತೆಗೆ ಜಲಮಂಡಳಿಯ ಲೈನ್ ನಿಂದ ಕೊಳಚೆ ನೀರು ಕೆರೆಗೆ ಸೇರುತ್ತಿದೆ. ಈ ಸಂಬಂಧ ಬಿಡಿಎ ಹಾಗೂ ಜಲಮಂಡಳಿಯಿಂದ ಇರುವ ಸಮಸ್ಯೆಯನ್ನು ಸರಿಪಡಿಸಿ ಕೊಡುವುದಾಗಿ ತಿಳಿಸಲಾಗಿದೆ ಎಂದರು.
ಸಭೆಯಲ್ಲಿ ಸಹಕಾರ ಸಚಿವರು  ಎಸ್.ಟಿ.ಸೋಮಶೇಖರ್, ವಲಯ ಆಯುಕ್ತ ರೆಡ್ಡಿ ಶಂಕರ ಬಾಬು, ವಲಯ ಜಂಟಿ ಆಯುಕ್ತ ನಾಗರಾಜು, ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಇಂಜಿನಿಯರ್ ಪ್ರಹ್ಲಾದ್ ಸೇರಿ ಮತ್ತಿತರರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಚಾಲನೆ