ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಆದೇಶವನ್ನು ಹೊರಡಿಸಿದ್ದು, ಸರ್ಕಾರಿ ಶಾಲೆಗಳ ಸುತ್ತಲಿನ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ನಿಷೇಧಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಆಯೋಗ, ಶಾಲೆಗಳ ಆವರಣದಲ್ಲಿ ಕ್ಯಾಂಟೀನ್, ಕೆಫೆಟೇರಿಯಾ, ಅಂಗಡಿಗಳಲ್ಲಿ ಚಿಪ್ಸ್, ಸಂಸ್ಕರಿತ ಹಣ್ಣಿನ ಜ್ಯೂಸ್ ಪೊಟ್ಟಣ ಮುಂತಾದವುಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸುವಂತೆ ಆದೇಶವನ್ನು ಹೊಡಿಸಿದ ಹಿನ್ನಲೆಯಲ್ಲಿ ಸಚಿವರು ಈ ಕ್ರಮಕ್ಕೆ ಮುಂದಾಗಿದ್ದಾರೆ.