ಜಯಸೂರ್ಯ ಎನ್ನುವ ಆರೋಪಿ ಅಪ್ರಾಪ್ತ ಬಾಲಕಿಯ ಮೇಲೆ 2 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ ಘಟನೆ ಬಹಿರಂಗವಾಗಿದೆ.
16 ವರ್ಷದ ಬಾಲಕಿಯನ್ನು ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಇದೀಗ ವಿವಾಹವಾಗಲು ನಿರಾಕರಿಸಿದ್ದರಿಂದ 7 ತಿಂಗಳ ಗರ್ಭಿಣಿಯಾಗಿರುವ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಮಾಜ ಸೇವೆ ಮಾಡುವುದಾಗಿ ಜನತೆಯನ್ನು ನಂಬಿಸುತ್ತಿದ್ದ ಆರೋಪಿ ಜಯಸೂರ್ಯ, ಈ ಹಿಂದೆ ಕೂಡಾ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸವೇಶ್ವರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಜಯಸೂರ್ಯನನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ.