ವಿಧಾನ ಸಭೆ ಚುನಾವಣಾ ದಿನಾಂಕ ಘೋಷಣೆ ಆದ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಯತ್ತ ಮುಖ ಮಾಡಿದ್ದಾರೆ. ಚುನಾವಣೆ ಪ್ರಚಾರಕ್ಕಾಗಿ ಇಂದಿನಿಂದ ಐದು ದಿನಗಳ ಕಾಲ ಮೈಸೂರಿನಲ್ಲಿ ಠಿಕಾಣಿ ಹೂಡಲಿದ್ದಾರೆ.
ಶತಾಯಗತಾಯ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿಎಂ ಸಿದ್ದರಾಮಯ್ಯ ತವರು ರಾಜಕಾರಣಕ್ಕೆ ಸಂಪೂರ್ಣ ಸಮಯ ಮೀಸಲಿಟ್ಟು ಅಬ್ಬರದ ಪ್ರಚಾರ ಮಾಡಲಿದ್ದಾರೆ.
ಚಾಮುಂಡೇಶ್ಚರಿ ಕ್ಷೇತ್ರದಲ್ಲಿ ಮತ ಬೇಟೆಗೆ ಭರ್ಜರಿ ಪ್ಲಾನ್ ಮಾಡ್ಕೊಂಡಿದ್ದಾರೆ. ಐದು ದಿನಗಳ ಕಾಲ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಮಿಂಚಿನ ಸಂಚಲನ ನಡೆಸಲಿದ್ದಾರೆ. ಇಂದು ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹಂಚ್ಯಾ, ಕಾಳಿಸಿದ್ದನಹುಂಡಿ, ಉದ್ಬೂರಿನಲ್ಲಿ ಬಿರುಸಿನ ಪ್ರಚಾರ ಮಾಡಲಿದ್ದಾರೆ.
ಐದು ದಿನಗಳ ಕಾಲ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಸರ್ಕಾರದ ಕೆಲಸ ಬಿಟ್ಟು ಎಂ ಸಿದ್ದರಾಮಯ್ಯ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.