Select Your Language

Notifications

webdunia
webdunia
webdunia
webdunia

ಆಸ್ತಿ ತೆರಿಗೆ ಹೆಚ್ಚಳ: ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಕೋಲಾಹಲ

ಆಸ್ತಿ ತೆರಿಗೆ ಹೆಚ್ಚಳ: ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಕೋಲಾಹಲ
ಬೆಂಗಳೂರು , ಶುಕ್ರವಾರ, 29 ಏಪ್ರಿಲ್ 2016 (11:31 IST)
ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಘೋಷಿಸಿರುವುದನ್ನು ವಿರೋಧಿಸಿ ಬಿಜೆಪಿ ಸದಸ್ಯರು ಮೇಯರ್ ಪೀಠಕ್ಕೆ ಮುತ್ತಿಗೆ ಹಾಕಿದ್ದರಿಂದ ಕೆಲ ಕಾಲ ಗದ್ದಲ ಗೊಂದಲದ ವಾತಾವರಣ ಸೃಷ್ಟಿಯಾಗಿದೆ
 
ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಬಿಜೆಪಿ ಸದಸ್ಯರ ಕೂಗಾಟ ತಳ್ಳಾಟದಿಂದ ಕೆಲ ಕಾಲ ಉದ್ರಿಕ್ತ ವಾತಾವರಣ ಉಂಟಾಗಿತ್ತು. ಮೇಯರ್ ಖುರ್ಚಿಗೆ ಮುತ್ತಿಗೆ ಹಾಕಿದ ಬಿಜೆಪಿ ಸದಸ್ಯರು ಕೂಡಲೇ ಆಸ್ತಿ ತೆರಿಗೆ ಹೆಚ್ಚಳವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದರು.
 
ಗಾಂಧಿ ಟೋಪಿ ಧರಿಸಿ ಬಿಜೆಪಿ ಕಾರ್ಯಕರ್ತರು ಸದನದ ಬಾವಿಗಿಳಿದು ಧರಣ ನಡೆಸಿದರು. ಡೌನ್ ಡೌನ್ ಕಾಂಗ್ರೆಸ್ ಎಂದು ಘೋಷಣೆ ಕೂಗಿದ ವಿಪಕ್ಷಗಳ ಸದಸ್ಯರು ಕಾಂಗ್ರೆಸ್ ಜನ ವಿರೋಧಿ ಪಕ್ಷ ಎನ್ನುವ ಘೋಷಣೆಗಳನ್ನು ಕೂಗಿದರು.
 
ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಕೌನ್ಸಿಲ್ ಸಭೆಯನ್ನು 15 ನಿಮಿಷಗಳ ಕಾಲ ಮುಂದೂಡಲಾಯಿತು. ಆಸ್ತಿ ತೆರಿಗೆ ಹೆಚ್ಚಳ ವಾಪಸ್ ಪಡೆಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ ಕೇಜ್ರಿವಾಲ್