Publish Date: Tue, 18 Apr 2023 (09:26 IST)
Updated Date: Tue, 18 Apr 2023 (10:09 IST)
ಚಿತ್ರದುರ್ಗ : ಪಕ್ಷಾಂತರದ ಸಾಧಕ ಬಾಧಕ ಚುನಾವಣೆ ಬಳಿಕ ತಿಳಿಯಲಿದೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿಯ ಹೆಲಿಪ್ಯಾಡ್ಗೆ ಆಗಮಿಸಿದ್ದ ಹೆಚ್ಡಿಕೆ ಮಾಜಿ ಎಂಎಲ್ಸಿ ರಘು ಆಚಾರ್ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ವೇಳೆ ಪಕ್ಷಾಂತರ ಸಹಜವಾಗಿ ನಡೆಯುತ್ತದೆ. ಆದರೆ ಅದರ ಸಾಧಕ ಬಾಧಕ ಚುನಾವಣೆ ಬಳಿಕ ಅವರಿಗೆ ಅರ್ಥವಾಗಲಿದೆ ಎಂದು ಹೇಳಿದರು.
ಕೋಟೆ ನಾಡಿನ ಮಾಜಿ ಎಂಎಲ್ಸಿ ರಘು ಆಚಾರ್ ಜೆಡಿಎಸ್ ಸೇರ್ಪಡೆಯಿಂದ ಈ ಭಾಗದಲ್ಲಿ ಬಲ ಬಂದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 3-4 ಸ್ಥಾನಗಳಲ್ಲಿ ಜೆಡಿಎಸ್ ಗೆಲ್ಲುವ ಭರವಸೆ ಇದೆ. ಏಪ್ರಿಲ್ 19ಕ್ಕೆ ರಘು ಆಚಾರ್ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ನಾನು ಅವರೊಂದಿಗೆ ಬರುತ್ತೇನೆ ಎಂದು ತಿಳಿಸಿದರು.