ಮಂಗಳೂರು : ಕರಾವಳಿ ನಗರಿಯ ಪ್ರತಿಷ್ಠಿತ ಕಾಲೇಜೊಂದರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಪೆಂಟ್ ಹೌಸ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
									
			
			 
 			
 
 			
					
			        							
								
																	ಶಮೀನಾ, ಆಯಿಷಮ್ಮ, ಸಿದ್ದೀಕ್ ಬಂಧಿತ ಆರೋಪಿಗಳು. ಪಿಯುಸಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ನಾಲ್ವರ ರಕ್ಷಣೆ ಮಾಡಲಾಗಿದೆ.
									
										
								
																	ಪೆಂಟ್ ಹೌಸ್ನಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ವೇಶ್ಯಾವಾಟಿಕೆಯ ಚಲನವಲನವನ್ನು ಸೆರೆ ಹಿಡಿದಿಟ್ಟುಕೊಂಡ ದೃಶ್ಯಾವಳಿಗಳಿಂದ ಯುವತಿಯೊಬ್ಬಳು ಬಾಲಕಿಯರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳು.
									
											
							                     
							
							
			        							
								
																	ಈ ಕುರಿತು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆ, ಐ.ಟಿ.ಪಿ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.