Select Your Language

Notifications

webdunia
webdunia
webdunia
webdunia

ಕನ್ನಡಿಗರ ಮೇಲೆ ನಡೆದ ದೌರ್ಜನ್ಯ: ತಮಿಳುನಾಡಿಗೆ ಸಿಎಂ ವಾರ್ನಿಂಗ್

ಕನ್ನಡ ಪ್ರಾದೇಶಿಕ
ಬೆಂಗಳೂರು , ಸೋಮವಾರ, 12 ಸೆಪ್ಟಂಬರ್ 2016 (12:34 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ದೌರ್ಜನ್ಯ ಹಿನ್ನೆಲೆಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಯದಂತೆ ತಮಿಳುನಾಡು ಸರಕಾರ ಎಚ್ಚರ ವಹಿಸಬೇಕು. ಇಲ್ಲದಿದ್ದರೇ ಮುಂದಿನ ಪರಿಣಾಮ ಕೆಟ್ಟದಾಗಿರುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ದೌರ್ಜನ್ಯವನ್ನು ತಮಿಳುನಾಡು ಸರಕಾರ ತಡೆಯುವ ವಿಶ್ವಾಸವಿದೆ. ಒಂದು ವೇಳೆ ಇದೆ ಪರಿಸ್ಥಿತಿ ಮುಂದುವರೆದರೆ ಮುಂದಿನ ಪರಿಣಾಮ ಕೆಟ್ಟದಾಗಿರುತ್ತೆ ಎಂದರು.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದೌರ್ಜನೆ ನಡೆಯುತ್ತಿದೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ತಮಿಳುನಾಡು ಸರಕಾರ ಮುಂದಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
 
ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 5ರಂದು ತಮಿಳುನಾಡಿಗೆ ಪ್ರತಿ ದಿನ 15 ಸಾವಿರ ಕ್ಯೂಸೆಕ್‌ನಂತೆ 10 ದಿನ ನೀರು ಬಿಡವಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸೆಪ್ಟೆಂಬರ್ 10ರಂದು ರಾಜ್ಯ ಸರಕಾರ ಅರ್ಜಿ ಸಲ್ಲಿಸಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕರುನಾಡಿಗೆ ಮತ್ತೆ ಆಘಾತ: ಪ್ರತಿದಿನ 12 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ