Publish Date: Thu, 30 Aug 2018 (18:50 IST)
Updated Date: Thu, 30 Aug 2018 (18:52 IST)
ಮುಖ್ಯರಸ್ತೆಯನ್ನು ದುರಸ್ಥಿಗೊಳಿಸುವಂತೆ ಅಲ್ಲಿನ ಜನರು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಪ್ರಯೋಜನವಾಗದಿದ್ದಾಗ ವಿನೂತನ ಪ್ರತಿಭಟನೆ ಮಾಡಿ ಗಮನ ಸೆಳೆದಿದ್ದಾರೆ.
ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ಮುಖ್ಯ ಬಜಾರ ರಸ್ತೆ ಕೆಸರು ಗದ್ದೆಯಂತಾಗಿದೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ರಸ್ತೆ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಜನರು ಮನವಿ ಮಾಡಿದ್ದಾರೆ. ಆದರೆ ರಸ್ತೆ ಮತ್ತಷ್ಟು ಕೆಸರು ಗದ್ದೆಯಂತಾಯಿತೆ ಹೊರತು ಅಭಿವೃದ್ಧಿಯಾಗಲಿಲ್ಲ. ಹೀಗಾಗಿ ಆಕ್ರೋಶಗೊಂಡ ಜನರು ಮುಖ್ಯರಸ್ತೆಯ ಮೇಲೆಯೇ ಭತ್ತ ನಾಟಿ ಮಾಡಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.
ಜನರ ಪ್ರತಿಭಟನೆ ಇಂದಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಮುಖ್ಯ ರಸ್ತೆ ಅಭಿವೃದ್ಧಿ ಪಡಿಸುತ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.