Publish Date: Wed, 11 Jul 2018 (15:01 IST)
Updated Date: Wed, 11 Jul 2018 (15:05 IST)
ಕನ್ನಡ ಹೋರಾಟಗಾರರು, ಸಾಹಿತಿಗಳ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂಂದಾರ್ ಷಾ ವಿರುದ್ಧ ಇಂದು ಕನ್ನಡ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು. ವಾಟಾಳ್ ನಾಗರಾಜ್ ಸೇರಿ ಹಲವರನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆಗೊಳಿಸಿದರು.
ಹೆಬ್ಬಗೋಡಿಯ ಬಯೋಕಾನ್ ಕಾರ್ಖಾನೆ ಮುಂಭಾಗದಲ್ಲಿ ಕನ್ನಡ ಒಕ್ಕೂಟಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಅವಹೇಳನಕಾರಿ ಹೇಳಿಕೆ ನೀಡಿರುವ ಷಾ ಕೂಡಲೇ ಕ್ಷಮೆ ಕೇಳಬೇಕು ಎಂದು ಹೋರಾಟಗಾರರು ಆಗ್ರಹಿಸಿದರು. ಬಯೋಕಾನ್ ಸಂಸ್ಥೆಗೆ ಮುತ್ತಿಗೆ ಹಾಕಲು ಯತ್ನಿಸುವ ಸಂದರ್ಭದಲ್ಲಿ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಆ ಬಳಿಕ ಬಿಡುಗಡೆಗೊಳಿಸಿದರು.