Select Your Language

Notifications

webdunia
webdunia
webdunia
webdunia

ಅಂಬೇಡ್ಕರ್‌ ಪ್ರತಿಮೆಗೆ ಅಪಮಾನ ಖಂಡಿಸಿ ಪ್ರತಿಭಟನೆ

ಅಂಬೇಡ್ಕರ್‌

geetha

ಕಲಬುರಗಿ , ಮಂಗಳವಾರ, 23 ಜನವರಿ 2024 (19:00 IST)
ಕಲಬುರಗಿ :  ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸುವಂತೆ ಒತ್ತಾಯಿಸಿ ರಸ್ತೆ ತಡೆ ಮಾಡಿದ ಪ್ರತಿಭಟನಾಕಾರರು ಟೈರ್‌ ಗೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಿಡಿಗೇಡಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸುವಂತೆ ಒತ್ತಾಯಿಸಿ ಮಂಗಳವಾರ ದಲಿತಪರ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸಿದೆ. ವಿಶ್ವವಿದ್ಯಾಲಯ ಪೊಲೀಸ್‌ ಠಾಣಾ ವ್ಯಾಪ್ತಿಯ  ಕೋಟನೂರ್‌ (ಡಿ) ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್‌ ಪ್ರತಿಮೆಗೆ ಅಪಮಾನವೆಸಗಿದ್ದರು ಎನ್ನಲಾಗಿದೆ.

ಶಾಲಾಬಾಲಕರು, ಗ್ರಾಮಸ್ಥರು ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಹಾಜರಿದ್ದರು. ಸ್ಥಳೀಯ ಪೊಲೀಸರು ದೂರು ಸ್ವೀಕರಿಸಿ ಖಚಿತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಬಳಿಕ ಪೊಲೀಸರೇ ಪ್ರತಿಮೆಯನ್ನು ಶುಚಿಗೊಳಿಸಿ ಮಾಲಾರ್ಪಣೆ ಮಾಡಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಮಂದಿರ ನಿರ್ಮಾಣಕೆ ಪಾಕಿಸ್ತಾನ ಪ್ರತಿಕ್ರಿಯೆ ಏನು ಗೊತ್ತಾ?