Publish Date: Wed, 21 Dec 2022 (20:16 IST)
Updated Date: Wed, 21 Dec 2022 (20:18 IST)
ಕುಕ್ಕರ್ ಬ್ಲಾಸ್ಟ್ ಶಂಕಿತ ಉಗ್ರ ಶಾರೀಕ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ರಾಮನಗರ ಐಜೂರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಡಿ.ಕೆ.ಶಿವಕುಮಾರ್ ಭಯೋತ್ಪಾದಕರ ಸಹೋದರ, ಡಿಕೆ ಶಿವಕುಮಾರ್ ಉಗ್ರರಿಗೆ ಬೆಂಬಲ ನೀಡುತ್ತಿದ್ದಾರೆ. ಈ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.