Publish Date: Thu, 29 Nov 2018 (17:10 IST)
Updated Date: Thu, 29 Nov 2018 (17:12 IST)
ಮಲೆನಾಡಿನಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಕಾರಿಡಾರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ ಟೈರ್ ಗೆ ಬೆಂಕಿ ಹಚ್ಚಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಹಾಸನದ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ನಿರಂತರ ಧರಣಿ ಆರಂಭಗೊಂಡಿದೆ.
ಸಕಲೇಶಪುರ ತಾಲ್ಲೂಕಿನ ಸುತ್ತಮುತ್ತಲ ಗ್ರಾಮಸ್ಥರು ಧರಣಿಯಲ್ಲಿ ಭಾಗಿಯಾಗಿದ್ದಾರೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ ಮಾಡಲಾಯಿತು.
ಸರ್ಕಾರ ಕಾಡಾನೆ ಸಮಸ್ಯೆಗೆ ಪರಿಹಾರ ನೀಡುವ ವರೆಗೂ ಧರಣಿ ಅಂತ್ಯಗೊಳಿಸುವುದಿಲ್ಲ. ಆನೆ ಕಾರಿಡಾರ್ ನಿರ್ಮಾಣ ಆಗಲೇಬೇಕು ಎಂದು ರಸ್ತೆ ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.