Publish Date: Sat, 16 Apr 2022 (16:47 IST)
Updated Date: Sat, 16 Apr 2022 (16:50 IST)
ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ರಾಜ್ಯವ್ಯಾಪಿ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ..ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಕಛೇರಿಯಿಂದ ಎಸ್ಪಿ ಕಚೇರಿವರೆಗೂ ಕಾಲ್ನಡಿಗೆ ಹಮ್ಮಿಕೊಂಡು ಹೋರಾಟ ನಡೆಸಿದ್ರು..ಕಾಲ್ನಡಿಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಚಿವ H.M.ರೇವಣ್ಣ, ಮಾಜಿ ಶಾಸಕ ಬಾಲಕೃಷ್ಣ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ರು..ಮತ್ತೊಂದೆಡೆ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿದ್ರು..ಈಶ್ವರಪ್ಪ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.
geetha
Publish Date: Sat, 16 Apr 2022 (16:47 IST)
Updated Date: Sat, 16 Apr 2022 (16:50 IST)