Select Your Language

Notifications

webdunia
webdunia
webdunia
webdunia

ಆರ್. ಶಂಕರ್ ಗೆ ಸಚಿವ ಸ್ಥಾನ ಕೈ ಬಿಟ್ಟಿದ್ದಕ್ಕೆ ಪ್ರತಿಭಟನೆ

ಆರ್. ಶಂಕರ್ ಗೆ ಸಚಿವ ಸ್ಥಾನ ಕೈ ಬಿಟ್ಟಿದ್ದಕ್ಕೆ ಪ್ರತಿಭಟನೆ
ಹಾವೇರಿ , ಭಾನುವಾರ, 23 ಡಿಸೆಂಬರ್ 2018 (15:53 IST)
ಸಚಿವ ಸ್ಥಾನದಿಂದ ಆರ್.ಶಂಕರ ಅವರನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳಿಂದ ಪ್ರತಿಭಟನೆ ನಡೆದಿದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ಬೆಂಬಲಿಗರಿಂದ ಪ್ರತಿಭಟನೆ‌ ಮಾಡಲಾಯಿತು. ಹಾವೇರಿ ಜಿಲ್ಲೆ ರಾಣೇಬೆನ್ನೂರು ಕ್ಷೇತ್ರದ ಶಾಸಕರಾಗಿರುವ ಆರ್. ಶಂಕರ್ ಅವರನ್ನು ಸಂಪುಟ ಪುನರಚನೆಯಲ್ಲಿ ಸಚಿವ ಸ್ಥಾನದಿಂದ ಕೈ ಬಿಟ್ಟಿದ್ದಕ್ಕೆ ನಗರದ ಕೋರ್ಟ್ ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಮಾಜಿ ಸಚಿವ ಆರ್. ಶಂಕರ ಬೆಂಬಲಿಗರು ಪ್ರತಿಭಟನೆ ನಡೆಸಿ, ಸಚಿವ ಸ್ಥಾನದಲ್ಲಿ ಮುಂದುವರಿಸುವಂತೆ ಆಗ್ರಹ ಮಾಡಿದರು.

ಇನ್ನೂ ಶಂಕರ ಅವರನ್ನ ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಚಿಕಿತ್ಸೆ ಫಲಕಾರಿಯಾಗದೇ ಯೋಧ ಹುತಾತ್ಮ