Select Your Language

Notifications

webdunia
webdunia
webdunia
webdunia

ಎಸ್‌ಎಫ್ಐ ಸಂಘಟನೆಯಿಂದ ಧರಣಿ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ಎಸ್‌ಎಫ್ಐ ಸಂಘಟನೆಯಿಂದ ಧರಣಿ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ
ಬೆಂಗಳೂರು , ಶುಕ್ರವಾರ, 30 ಜನವರಿ 2015 (15:12 IST)
ರಾಜ್ಯದಲ್ಲಿನ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕೆಂದು ಒತ್ತಾಯಿಸಿ ನಗರದ ಶೇಷಾದ್ರಿ ರಸ್ತೆಯಲ್ಲಿ ಸಂಚರಿಸುತ್ತಿದ್ದ  ವಾಹನಗಳನ್ನು ತಡೆಗಟ್ಟಿ ಧರಣಿ ನಡೆಸುತ್ತಿದ್ದ ಎಸ್‌ಎಫ್ಐ ಸಂಘಟನೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ. 
 
ಶಿಕ್ಷಣ ಬದಲಾವಣೆಗೆ ಒತ್ತಾಯಿಸುತ್ತಿದ್ದ ವಿದ್ಯಾರ್ಥಿಗಳು, ನಗರದ ಶೇಷಾದ್ರಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ಧರಣಿ ನಡೆಸುತ್ತಿದ್ದರು. ಇದರಿಂದ ನಗರದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರಿತಪಿಸುವ ಪರಿಸ್ಥಿತಿ ಎದುರಾಯಿತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೂರ್ವ ವಿಭಾಗದ ಡಿಸಿಪಿ ಲಾಬೂರಾಮ್ ಅವರು ಭೇಟಿ ನೀಡಿ ವಿದ್ಯಾರ್ಥಿಗಳನ್ನು ಮನವೊಲಿಸಲೆತ್ನಿಸಿದರು. ಆದರೆ ವಿದ್ಯಾರ್ಥಿಗಳು ಮಣಿಯದ ಕಾರಣ ಲಘು ಲಾಠಿ ಪ್ರಹಾರಕ್ಕೆ ಸೂಚಿಸಿದರು.
 
ಡಿಸಿಪಿ ಅವರ ಸೂಚನೆಯಂತೆ ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳು ಅಸ್ವಸ್ಥಳಾದ ಸನ್ನಿವೇಶವೂ ಕಂಡು ಬಂತು. ಇದರಿಂದ ಕುಪಿತಗೊಂಡ ವಿದ್ಯಾರ್ಥಿಗಳು ಪೊಲೀಸರ ವಿರುದ್ಧ ಎರಗಲೆತ್ನಿಸಿದರು. ಇದರಿಂದ ಧರಣಿ ತಾರಕಕ್ಕೇರಿದ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಬಂಧಿಸಲಾಯಿತು.   

Share this Story:

Follow Webdunia kannada